ಸುಕೇಶ್ ಚಂದ್ರಶೇಖರ್ ವಂಚನೆ ಪ್ರಕರಣ – ಇಡಿ ವಿಚಾರಣೆಗೆ ಹಾಜರಾದ ನಟಿ ನೋರಾ ಫತೇಹಿ.

31
firstsuddi

ನವದೆಹಲಿ : 200 ಕೋಟಿ ವಂಚನೆ ಪ್ರಕರಣದ ಆರೋಪಿ ಸುಕೇಶ್ ಚಂದ್ರಶೇಖರ್ ಮತ್ತು ಸಹಚರರ ವಿರುದ್ಧ ನಡೆಯುತ್ತಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಬಾಲಿವುಡ್ ನಟಿ ನೋರಾ ಫತೇಹಿ ಅವರು ಇಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

30 ವರ್ಷದ ನೋರಾ ಫತೇಹಿ ಅವರನ್ನು ಈ ಹಿಂದೆ ಇಡಿ ವಿಚಾರಣೆ ನಡೆಸಿದ್ದು, ಇಂದು ಚಂದ್ರಶೇಖರ್ ಅವರೊಂದಿಗಿನ ನಂಟಿನ ಬಗ್ಗೆ ಬಾಲಿವುಡ್ ನಟಿಯನ್ನು ವಿಚಾರಣೆ ನಡೆಸಲಾಗುವುದು ಮತ್ತು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ)ಯ ಸೆಕ್ಷನ್‌ಗಳ ಅಡಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಕೂಡ 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಆರೋಪಿ ಆಗಿದ್ದಾರೆ. ಅವರ ವಿರುದ್ಧ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಈ ಕೇಸ್ ನಲ್ಲಿ ನೋರಾ ಫತೇಹಿ ಅವರ ಹೇಳಿಕೆಯನ್ನು ಇಡಿ ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ.

ಸಾಕಷ್ಟು ಉದ್ಯಮಿಗಳಿಗೆ ಸುಕೇಶ್ ಚಂದ್ರಶೇಖರ್ ಅವರು ವಂಚನೆ ಮಾಡಿದ್ದಾರೆ ಎಂಬ ಆರೋಪ ಇದೆ. ಉದ್ಯಮಿಗಳಿಂದ ಪಡೆದುಕೊಂಡ ಹಣವನ್ನು ತಂದು, ಅದರಿಂದ ನಟಿಯರಿಗೆ ದುಬಾರಿ ಉಡುಗೊರೆಗಳನ್ನು ನೀಡಿದ್ದರು. ನೋರಾ ಫತೇಹಿ ಕೂಡ ಅವರಿಂದ ಗಿಫ್ಟ್ ಪಡೆದಿದ್ದರು ಎಂಬ ಮಾತು ಕೇಳಿಬಂದಿದೆ.