ಸುನಿಲ್ ಕುಮಾರ್ ವಿರುದ್ಧ ಲೋಕಾಯುಕ್ತಕ್ಕೆ ಪ್ರಮೋದ್ ಮುತಾಲಿಕ್ ದೂರು…

57
firstsuddi

ಉಡುಪಿ: ಕಾರ್ಕಳ ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಬೇನಾಮಿ ಆಸ್ತಿ ಆರೋಪ ಮಾಡಿದ್ದು, ಈ ಸಂಬಂಧ ಉಡುಪಿಯ ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದಾರೆ.

ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಶಿವಪುರ ಕೆರೆಕಟ್ಟೆ ಗ್ರಾಮದಲ್ಲಿ 67 ಎಕರೆ ಕೃಷಿ ಭೂಮಿಯನ್ನು ಬೇನಾಮಿ ಹೆಸರಿನಲ್ಲಿ ಬೇರೆ ಬೇರೆ ರೈತರಿಂದ ಖರೀದಿ ಮಾಡಿದ್ದಾರೆ. ಮುಂದೆ ಅದು ಕೈಗಾರಿಕಾ ಪ್ರದೇಶವಾಗಿ ಭೂ ಪರಿವರ್ತನೆ ಮಾಡಿ 4-5 ಪಟ್ಟು ಹೆಚ್ಚಿನ ಬೆಲೆಗೆ ಸರ್ಕಾರ ಖರೀದಿ ಮಾಡುತ್ತದೆ. 4 ಚಿಲ್ಲರೆ ಕೋಟಿಗೆ ಖರೀದಿಸುವ ಮೂಲಕ ಜಮೀನು ಹೊಂದಿರುವ ಬಡ ರೈತರಿಗೂ ಅನ್ಯಾಯ ಆಗಿದೆ. ಈ ಅಕ್ರಮದ ಹಿಂದೆ ಸ್ಥಳೀಯ ಶಾಸಕ, ಪ್ರಭಾವಿ ಮಂತ್ರಿ ಕೈವಾಡ ಇರುವ ಶಂಕೆ ಇದೆ ಎಂದು ಮುತಾಲಿಕ್ ಆರೋಪಿಸಿದ್ದಾರೆ.

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಮುತಾಲಿಕ್ ಈ ಆರೋಪ ಮಾಡಿದ್ದು ರಾಜಕೀಯವಾಗಿ ಕೋಲಾಹಲ ಸೃಷ್ಟಿಸುವ ಸಾಧ್ಯತೆ ಇದೆ.