ನವದೆಹಲಿ : ಮುಂದಿನ ಆದೇಶದವರೆಗೆ ವಿದ್ಯಾರ್ಥಿಗಳು ಧಾರ್ಮಿಕ ಸಂಕೇತದ ವಸ್ತ್ರಗಳನ್ನು ಧರಿಸಿ ಶಾಲೆ- ಕಾಲೇಜುಗಳಿಗೆ ಹೋಗುವಂತಿಲ್ಲ ಎಂದು ನಿನ್ನೆ ಕರ್ನಾಟಕ ಹೈಕೋರ್ಟ್ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿತ್ತು. ಹೈಕೋರ್ಟ್ ನ ಈ ನಿಲುವು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಕೆಯಾಗಿತ್ತು. ಈ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಹಿಜಾಬ್ ವಿವಾದವನ್ನು ಖಂಡಿತವಾಗಿಯೂ ಪರಿಗಣಿಸುತ್ತೇವೆ. ಆದರೆ ಹೈಕೋರ್ಟ್ ತೀರ್ಪು ಮೊದಲು ಬರಲಿ, ಈ ಕುರಿತಾಗಿ ಸೂಕ್ತ ಸಮಯದಲ್ಲಿ ಮಧ್ಯಪ್ರವೇಶ ಮಾಡುತ್ತೇವೆ. ಆದ್ರೆ, ತಕ್ಷಣಕ್ಕೆ ಅರ್ಜಿಗಳ ತುರ್ತುವಿಚಾರಣೆ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟವಾಗಿ ತಿಳಿಸಿದೆ.










