ನವದೆಹಲಿ : ಸುಪ್ರೀಂ ಕೋರ್ಟ್‍ನ ಮುಖ್ಯನ್ಯಾಯಧೀಶರಾದ ರಂಜನ್ ಗೊಗೋಯ್ ಅವರು ನವೆಂಬರ್ 17ರಂದು ಮುಖ್ಯ ನ್ಯಾಯಾಧೀಶ ಸ್ಥಾನದಿಂದ ನಿವೃತ್ತಿ ಹೊಂದಲಿದ್ದು, ತನ್ನ ನಂತರ ಮುಖ್ಯ ನ್ಯಾಯಾಧೀಶ ಸ್ಥಾನಕ್ಕೆ ಎಸ್.ಎ ಬೊಬ್ಬೆ ಅವರನ್ನು ನೇಮಕ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಈ ಹಿಂದಿನಿಂದಲೂ ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಾಧೀಶರು ನಿವೃತ್ತಿ ಹೊಂದುವ ಸಮಯದಲ್ಲಿ ತನ್ನ ನಂತರ ಮುಖ್ಯ ನ್ಯಾಯಾಧೀಶ ಸ್ಥಾನಕ್ಕೆ ಅತ್ಯಂತ ಹಿರಿಯ ನ್ಯಾಯಾಧೀಶರನ್ನು ಉತ್ತರಾಧಿಕಾರಿಯಾಗಿ ಶಿಫಾರಸ್ಸು ಮಾಡುವ ಸಂಪ್ರದಾಯವಿದ್ದು, ಅದರಂತೆ ಮುಖ್ಯ ನ್ಯಾಯಾಧೀಶ ರಂಜನ್ ಗೊಗೋಯ್ ಅವರು ತಮ್ಮ ನಿವೃತ್ತಿ ನಂತರ ಮುಖ್ಯ ನ್ಯಾಯಾಧೀಶ ಸ್ಥಾನಕ್ಕೆ ಹಿರಿಯ ನ್ಯಾಯಾಧೀಶ ಎಸ್.ಎ ಬೊಬ್ಬೆ ಅವರನ್ನು ನೇಮಕ ಮಾಡುವಂತೆ ಕಾನೂನು ಮತ್ತು ನ್ಯಾಯ ಸಚಿವಾಲಯಕ್ಕೆ ಪತ್ರವನ್ನು ಬರೆದಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.










