ನವದೆಹಲಿ : ಸುಪ್ರೀಂ ಕೋರ್ಟ್ನ 47ನೇ ಮುಖ್ಯ ನ್ಯಾಯಾಮೂರ್ತಿಯಾಗಿ ಶರದ್ ಅರವಿಂದ್ ಬೊಬ್ಡೆ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನೂತನ ಮುಖ್ಯ ನ್ಯಾಯಾಮೂರ್ತಿ ಶರದ್ ಅರವಿಂದ್ ಬೊಬ್ಡೆ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಮುಖ್ಯ ನ್ಯಾ. ರಂಜನ್ ಗೋಗಯ್ ಅವರ ನಿವೃತ್ತಿ ಬಳಿಕ ಸಿಜೆಐ ಆಗಿ ಪ್ರಮಾಣ ವಚನ ಸ್ವೀಕರಿಸಿದ ಶರದ್ ಅರವಿಂದ್ ಬೊಬ್ಡೆ ಅವರು ಇನ್ನು 17 ತಿಂಗಳ ಕಾಲ ನ್ಯಾಯಾಮೂರ್ತಿಯಾಗಿ ಮುಂದುವರೆಯಲಿದ್ದು, 2021ರ ಏ.23 ರವರೆಗೆ ಕಾರ್ಯ ನಿರ್ವಹಿಸಲಿದ್ದಾರೆ.










