ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿಯನ್ನ ನ್ಯಾಯಾಂಗ ಬಂಧನದಲ್ಲಿ ಇಡಲಾಗಿದೆ.
ಮಂಗಳವಾರ ಸಂಜೆ 7 ಗಂಟೆ ಸುಮಾರಿಗೆ ಯುವತಿ ಕೆಲಸ ಮುಗಿಸಿ ಬಸ್ ನಿಂದ ಇಳಿದು ನಡೆದುಕೊಂಡು ಮನೆಗೆ ಹೋಗುತ್ತಿದ್ದ ವೇಳೆ ಸ್ಥಳೀಯ ನಿವಾಸಿ ಗಣೇಶ್ ಎಂಬಾತ ಆಕೆಯ ಮೈ ಮೇಲೆ ಕೈ ಹಾಕಿ ಅತ್ಯಾಚಾರಕ್ಕೆ ಯತ್ನಿಸಿದ್ದ. ಅಲ್ಲದೆ ಯುವತಿಯನ್ನು ಹೊತ್ತುಕೊಂಡು ಹೋಗಲು ಯತ್ನಿಸಿದ್ದ. ಇದನ್ನು ನೋಡಿದ ಸ್ಥಳೀಯರು ಯುವತಿಯನ್ನು ರಕ್ಷಿಸಿ, ಆರೋಪಿಯನ್ನು ಹಿಡಿದು, ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನದಲ್ಲಿ ಇಡಲಾಗಿದೆ.










