ಸುಳ್ಳು ಆಸ್ತಿ ವಿವರ ಸಲ್ಲಿಕೆ ಆರೋಪ – ತನಿಖೆಗೆ ಸುಪ್ರೀಂಕೋರ್ಟ್ ಸೂಚನೆ…

74
firstsuddi

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಕಷ್ಟ ಎದುರಾಗಿದೆ. ಚುನಾವಣಾ ಆಯೋಗಕ್ಕೆ ಸುಳ್ಳು ಆಸ್ತಿ ವಿವರ ಸಲ್ಲಿಕೆ ಮಾಡಿದ ಆರೋಪದಡಿ ತನಿಖೆ ನಡೆಸುವಂತೆ ರಾಜ್ಯ ಹೈಕೋರ್ಟ್‍ಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. 

ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸಂಜಯ್ ಕಿಶನ್ ಕೌಲ್ ಹಾಗೂ ನ್ಯಾ.ಸುಂದರೇಶ್ ಪೀಠ ಈ ಸೂಚನೆ ನೀಡಿದೆ. ಪ್ರಜ್ವಲ್ ರೇವಣ್ಣ ತಮ್ಮ ಹದಿನೈದನೇ ವಯಸ್ಸಿನಲ್ಲೆ 23 ಕೋಟಿ ಆಸ್ತಿ ಮಾಡಿದ್ದಾರೆ. ಆದಾಯ ತೆರಿಗೆ ಇಲಾಖೆ ಸಲ್ಲಿಸಿದ ಮಾಹಿತಿಯಲ್ಲಿ ಈ ಅಂಶಗಳಲ್ಲಿಲ್ಲ, ಚುನಾವಣಾ ಆಯೋಗಕ್ಕೂ ಆಸ್ತಿಯ ಬಗ್ಗೆ ತಪ್ಪು ಮಾಹಿತಿ ನೀಡಿದ್ದಾರೆ. ಬೇನಾಮಿ ಆಸ್ತಿ ಮತ್ತು ಗೋಮಾಳ ಕಬಳಿಕೆ ಮಾಡಿದ್ದಾರೆ. ಈ ಬಗ್ಗೆ ಐಟಿಯಿಂದ ತನಿಖೆ ನಡೆಯಬೇಕು ಅರ್ಜಿದಾರ ದೇವರಾಜೇಗೌಡ ಮನವಿ ಮಾಡಿದ್ದರು.