ಸೂಕ್ತವಾದ ಚಿಕಿತ್ಸೆ ಸಿಗುತ್ತಿಲ್ಲ ಎಂದು ಆರೋಪಿಸಿ ಕೊರೊನಾ ಸೋಂಕಿತ ವ್ಯಕ್ತಿ ಆತ್ಮಹತ್ಯೆಗೆ ಶರಣು…

158
firstsuddi

ಬೆಂಗಳೂರು : ಸೂಕ್ತವಾದ ಚಿಕಿತ್ಸೆ ಸಿಗುತ್ತಿಲ್ಲ ಎಂಬ ಭಯದಿಮದ ಕೊರೊನಾ ಸೋಂಕಿತ ವ್ಯಕ್ತಿ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದಿದೆ. 466ನೇ ಸೋಂಕಿತ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದ್ದು, ನಗರದಲ್ಲಿ ಆಟೋ ಓಡಿಸಿ ಜೀವನ ಸಾಗಿಸುತ್ತಿದ್ದ ಇವರು ಕೊರೊನಾ ಸೋಂಕಿಗೆ ತುತ್ತಾಗಿ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಚಿಕಿತ್ಸೆಗಾಗಿ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸೋಂಕಿಗೆ ಸೂಕ್ತವಾದ ಚಿಕಿತ್ಸೆ ಸಿಗುತ್ತಿಲ್ಲ ಎಂದು ಆರೋಪಿಸಿ ಆಸ್ಪತ್ರೆಯ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕೊರೊನಾ ಸೋಂಕಿತ ವ್ಯಕ್ತಿ ಆಗಿರುವುದರಿಂದ ಸ್ಥಳದಲ್ಲಿ ಬ್ಯಾರಿಕೇಡ್ ಹಾಕಿ ಸ್ಥಳಕ್ಕೆ ಯಾರು ಬರದಂತೆ ಎಚ್ಚರಿಕೆ ವಹಿಸಲಾಗಿದ್ದು, ಈ ಕುರಿತು ವಿವಿ ಪುರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.