ಸೆಪ್ಟೆಂಬರ್ ನಿಂದ ಐಪಿಎಲ್ ಪಂದ್ಯಗಳು ಪುನಾರಂಭ : ಬಿಸಿಸಿಐ ನಿರ್ಧಾರ…

110
firstsuddi

ನವದೆಹಲಿ : ಕೊರೊನಾ ಆರ್ಭಟ ಹಿನ್ನಲೆ ಸ್ಥಗಿತಗೊಂಡಿದ್ದ ಐಪಿಎಲ್ ಪಂದ್ಯಗಳನ್ನು ಪುನಾರಂಭಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಿರ್ಧಾರ ಮಾಡಿದ್ದು, ಇದೇ ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ಐಪಿಎಲ್ ನ ಉಳಿದ ಪಂದ್ಯಗಳು ನಡೆಯಲಿವೆ ಎಂದು ತಿಳಿಸಿದೆ.

ಇಂದು ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆದ ವಿಶೇಷ ಸಾಮಾನ್ಯ ಸಭೆ ಬಳಿಕ ಬಿಸಿಸಿಐ ಈ ನಿರ್ಧಾರ ತೆಗೆದುಕೊಂಡಿದೆ. ಆದರೆ ಐಪಿಎಲ್-2021 ಸೀಸನ್ ನ ಉಳಿದ ಪಂದ್ಯಗಳು ಭಾರತದಲ್ಲಿ ನಡೆಯುವುದಿಲ್ಲ. ಬದಲಾಗಿ ಯುಎಇನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಸೆಪ್ಟೆಂಬರ್-ಅಕ್ಟೋಬರ್ ನಲ್ಲಿ ಭಾರತದಲ್ಲಿ ಮಳೆಗಾಲ ಇರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.