ಟೋಕಿಯೋ : ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಸೆಮಿ ಫೈನಲ್ಸ್ ನಲ್ಲಿ ಸೋಲನ್ನು ಅನುಭವಿಸಿದ್ದು, ಈ ಮೂಲಕ ಚಿನ್ನದ ಪದಕ ಗೆಲ್ಲುವ ಸಿಂಧು ಕನಸು ಭಗ್ನಗೊಂಡಿದೆ.
ಈ ಹಿಂದೆ ಜಪಾನ್ ನ ಅಕಾನೆ ಯಮಗುಚಿ ವಿರುದ್ಧ 21-13, 22-20 ಅಂತರದಿಂದ ಗೆಲುವು ಸಾಧಿಸಿ ಸೆಮಿಫೈನಲ್ ಗೆ ಲಗ್ಗೆ ಇಟ್ಟಿದ್ದ ಸಿಂಧು ವಿಶ್ವದ ನಂಬರ್ ಒನ್ ಮಹಿಳಾ ಬ್ಯಾಡ್ಮಿಂಟನ್ ತಾರೆ ತೈ ಜು ಯಿಂಗ್ ವಿರುದ್ಧ ನಡೆದ ಪಂದ್ಯದಲ್ಲಿ 18-21 ಹಾಗೂ 12-21 ಸೆಟ್ಗಳ ಅಂತರದಿಂದ ನಿರಾಸೆ ಅನುಭವಿಸಿದ್ದಾರೆ.
ಸೆಮಿಫೈನಲ್ ನಲ್ಲಿ ಸೋಲು ಕಂಡಿರುವ ಪಿ.ವಿ. ಸಿಂಧು ಅವರು ಕಂಚಿನ ಪದಕಕ್ಕಾಗಿ ಸ್ಪರ್ಧಿಸಲಿದ್ದು, ನಾಳೆ ನಡೆಯಲಿರುವ ಪಂದ್ಯದಲ್ಲಿ ಪಿ.ವಿ.ಸಿಂಧು ಅವರು ಹಿ ಬಿಂಗ್ ಜಿಯಾವೋ ಅವರೊಂದಿಗೆ ಸೆಣಸಾಡಲಿದ್ದಾರೆ.










