ಟೋಕಿಯೋ : ಟೋಕಿಯೋ ಒಲಿಂಪಿಕ್ಸ್ ನ ಬಾಕ್ಸಿಂಗ್ ನಲ್ಲಿ ಮಹಿಳಾ ಸ್ಪರ್ಧಿ ಲವ್ಲಿನಾ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಈ ಮೂಲಕ ಭಾರತಕ್ಕೆ ಮತ್ತೊಂದು ಪದಕ ಸಿಗುವುದು ಖಚಿತವಾಗಿದೆ.
ಟೋಕಿಯೋ ಒಲಿಂಪಿಕ್ಸ್ ನ ಮಹಿಳಾ ವಿಭಾಗದ 64-69 ಕೆ.ಜಿ ವಿಭಾಗದಲ್ಲಿ ಭಾರತದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಚೈನೀಸ್ ತೈಪೆ(ತೈವಾನ್) ಚಿನ್ ಚೀನ್ ಅವರನ್ನು 4-1 ಅಂಕದಿಂದ ಸೋಲಿಸಿ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಬಾಕ್ಸಿಂಗ್ ನಲ್ಲಿ ಸೆಮಿಫೈನಲ್ ಪ್ರವೇಶಿಸಿದ ಎಲ್ಲರಿಗೂ ಪದಕ ಸಿಗಲಿದೆ.










