ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ರೈಲಿಗೆ ಸಿಲುಕಿ ನಾಲ್ವರು ಸಾವು…

60
firstsuddi

ನವದೆಹಲಿ : ಸೆಲ್ಫಿ ತೆಗೆದುಕೊಳ್ಳುತ್ತಿದ್ದ ನಾಲ್ವರು ಯುವಕರು ರೈಲಿಗೆ ಸಿಲುಕಿ ಸಾವನ್ನಪ್ಪಿದ ಘಟನೆ ನಿನ್ನೆ ಸಂಜೆ ದೆಹಲಿಯ ಹೊರವಲಯದಲ್ಲಿರುವ ಗುರುಗ್ರಾಮ್ ನಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೇ ಮೇಲ್ಸೇತುವೆ ಬಳಿ ನಡೆದಿದೆ.

ಮೃತರನ್ನು ದೇವಿಲಾಲ್ ಕಾಲೋನಿ ನಿವಾಸಿಗಳಾದ ಸಮೀರ್ (19), ಯೂಸುಫ್ ಅಲಿಯಾಸ್ ಭೋಲಾ (21), ಮೊಹಮ್ಮದ್ ಅನಸ್ (20) ಮತ್ತು ಯುವರಾಜ್ ಗೋಗಿಯಾ (18) ಎಂದು ಗುರುತಿಸಲಾಗಿದೆ.

ಸರ್ಕಾರಿ ರೈಲ್ವೆ ಪೊಲೀಸ್ ಪ್ರಕಾರ, ದೆಹಲಿಯ ಸರಾಯ್ ರೋಹಿಲ್ಲಾದಿಂದ ಅಜ್ಮೀರ್ ಗೆ ಹೋಗುವ ಜನ ಶತಾಬ್ದಿ ಎಕ್ಸ್ ಪ್ರೆಸ್ ಗುರುಗಾಮ್ ರೈಲು ನಿಲ್ದಾಣದಿಂದ ಬಸಾಯಿ ರೈಲು ನಿಲ್ದಾಣದ ಕಡೆಗೆ ಚಲಿಸುತ್ತಿದ್ದಾಗ ಅಪಘಾತ ಸಂಭವಿಸಿದೆ.