ಕಾರವಾರ : ಸೇತುವೆಯಿಂದ ಕಾರೊಂದು ಕೆಳಗೆ ಉರುಳಿ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಲಂಡನ್ ಬ್ರಿಡ್ಜ್ ಬಳಿ ನಡೆದಿದೆ. ಮೃತರನ್ನು ಚಿಕ್ಕಮಗಳೂರು ಮೂಲದ ಕಿರಣ್(28) ಹಾಗೂ ರಾಕೇಶ್(28) ಎಂದು ಗುರುತಿಸಲಾಗಿದೆ. ಮೃತರು ಕಾರಿನಲ್ಲಿ ಒಟ್ಟು 4 ಮಂದಿ ಅಂಕೋಲಾದಿಂದ ಗೋವಾ ಕಡೆಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನುಳಿದ ಇಬ್ಬರು ಗಾಯಗೊಂಡಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಕಾರವಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.