ಸೈನಾ ನೆಹ್ವಲ್ ವಿರುದ್ಧ ಅವಹೇಳನಕಾರಿ ಟ್ವೀಟ್ – ನಟ ಸಿದ್ದಾರ್ಥ್ ವಿರುದ್ಧ ಎಫ್‍ಐಆರ್ ದಾಖಲು…

73
firstsuddi

ಹೈದರಾಬಾದ್ : ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ವಿರುದ್ಧ ಅವಹೇಳನಕಾರಿ ಟ್ವೀಟ್ ಮಾಡಿದ್ದ ತಮಿಳು ನಟ ಸಿದ್ದಾರ್ಥ್ ವಿರುದ್ಧ ಪ್ರಕರಣ ದಾಖಲಾಗಿದೆ.

ಬಿಜೆಪಿ ನಾಯಕರಾದ ನೀಲಂ ಭಾರ್ಗವ ರಾಮ್ ಮತ್ತು ಪ್ರೇರಣಾ ಟಿ ನೀಡಿದ ದೂರಿನ ಆಧಾರದ ಮೇಲೆ ಹೈದರಾಬಾದ್ ಪೊಲೀಸರು ನಟ ಸಿದ್ಧಾರ್ಥ್ ವಿರುದ್ಧ ಐಟಿ ಕಾಯ್ದೆಯ ಸೆಕ್ಷನ್ 67 ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 509 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪಂಜಾಬ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಭದ್ರತಾ ಲೋಪ ವಿಚಾರಕ್ಕೆ ಸಂಬಂಧಿಸಿದಂತೆ ನೆಹ್ವಾಲ್ ಮಾಡಿದ್ದ ಟ್ವೀಟ್ ಗೆ ಅವಹೇಳನಕಾರಿಯಾಗಿ ಪ್ರತಿಕ್ರಿಯೆ ನೀಡಿದ್ದ ಸಿದ್ಧಾರ್ಥ್ ವಿರುದ್ಧ ಇನ್ನಿಲ್ಲದ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಅವರು ಕ್ಷಮೆಯಾಚಿಸಿದ್ದರು. ಇದೀಗ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.