ಸೈನಿಕರು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ, ಓರ್ವ ಉಗ್ರನ ಹತ್ಯೆ…

191
firstsuddi

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಬೆಳಿಗ್ಗೆ ಉಗ್ರರು ಹಾಗೂ ಸೈನಿಕರ ನಡುವೆ ಗುಂಡಿನ ಚಕಮಕಿ ಮುಂದುವರಿದಿದ್ದು, ಓರ್ವ ಉಗ್ರನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ. ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಡ್ರ್ಯಾಗಡ್ ಸುಗಾನ್ ಎಂಬ ಗ್ರಾಮದ ಮನೆಯೊಂದರಲ್ಲಿ ಉಗ್ರರು ಅಡಗಿಕೊಂಡಿದ್ದಾರೆ ಎಂಬ ಮಾಹಿತಿಯನ್ನು ತಿಳಿದು ಮನೆಯನ್ನು ಸುತ್ತುವರಿಯುತ್ತಲೇ ಉಗ್ರರು ಸೈನಿಕರತ್ತ ಗುಂಡನ್ನು ಹಾರಿಸಿದ್ದು, ಈ ಸಂದರ್ಭದಲ್ಲಿ ಸೈನಿಕರು ಪ್ರತಿ ದಾಳಿ ನಡೆಸಿ ಓರ್ವ ಉಗ್ರನನ್ನು ಹೊಡೆದುರುಳಿಸಿದ್ದಾರೆ.