ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು…

64
firstsuddi

ನವದೆಹಲಿ : ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಇಂದು ಸಾಮಾನ್ಯ ವೈದ್ಯಕೀಯ ತಪಾಸಣೆಗಾಗಿ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸೋನಿಯಾ ಗಾಂಧಿಯವರ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಆಸ್ಪತ್ರೆಗೆ ಬಂದಿದ್ದಾರೆ. ಸೋನಿಯಾ ಗಾಂಧಿ ಅವರು ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗಿದೆ.

ಸೋನಿಯಾ ಗಾಂಧಿ ಅವರು ನಿನ್ನೆಯಿಂದ (ಜ.3) ಅಸ್ವಸ್ಥರಾಗಿದ್ದರು. ಅದಕ್ಕಾಗಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ನಿನ್ನೆ ಸಂಜೆ ಉತ್ತರ ಪ್ರದೇಶಕ್ಕೆ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆಯಲ್ಲಿ 7 ಕಿಮೀ ನಡೆದು ದೆಹಲಿಗೆ ಮರಳಿದ್ದಾರೆ.

ಉತ್ತರ ಪ್ರದೇಶದ ಬಾಘಪಾಟ್‌ನಲ್ಲಿರುವ ಮಾವಿಕಾಲನ್‌ನಲ್ಲಿ ನಿನ್ನೆ ರಾತ್ರಿ ಕಳೆದ ನಂತರ ಭಾರತ್ ಜೋಡೋ ಯಾತ್ರೆಯು ಇಂದು ಬೆಳಿಗ್ಗೆ 6 ಗಂಟೆಗೆ ಪುನಾರಂಭಗೊಂಡಿತು. ಆದ್ರೆ ಪ್ರಿಯಾಂಕಾ ಗಾಂಧಿ ಹಾಗೂ ರಾಹುಲ್ ಗಾಂಧಿ ತಡವಾಗಿ ಪಾಲ್ಗೊಳ್ಳುವ ಸಾಧ್ಯತೆಯಿದೆ.