ಸೋನಿಯಾ ಗಾಂಧಿ ಬಳಿಕ ಇದೀಗ ಪ್ರಿಯಾಂಕಾ ವಾದ್ರಾಗೂ ಕೋವಿಡ್.

53
firstsuddi

ನವದೆಹಲಿ : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬಳಿಕ ಇದೀಗ ಅವರ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸೋಂಕಿನ ಕೆಲವು ಲಕ್ಷಣಗಳು ಕಂಡುಬಂದಿದ್ದರಿಂದ ತಪಾಸಣೆಗೆ ಒಳಗಾಗಿದ್ದೆ. ಇದರಲ್ಲಿ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಕ್ವಾರಂಟೈನ್ ಗೆ ಒಳಗಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮ ಕೈಗೊಂಡು, ಪರೀಕ್ಷೆಗೊಳಪಡುವಂತೆ ಮನವಿ ಮಾಡಿದ್ದಾರೆ.

ಮೊನ್ನೆಯಷ್ಟೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕೋವಿಡ್-19 ದೃಢಪಟ್ಟಿದ್ದು, ಸೋನಿಯಾ ಗಾಂಧಿ ಅವರು ಕ್ವಾರಂಟೈನ್ ನಲ್ಲಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ ತಿಳಿಸಿದ್ದರು.