ಸೋಮಣ್ಣ ಪಕ್ಷ ಬಿಡ್ತಾರೆ ಅನ್ನೋದ್ರಲ್ಲಿ ಸತ್ಯಾಂಶ ಇಲ್ಲ : ಬಿಎಸ್‍ವೈ.

43
firstsuddi

ಚಿಕ್ಕೋಡಿ : ವಿ.ಸೋಮಣ್ಣನವರು ಪಕ್ಷ ಬಿಡುತ್ತಾರೆ ಅನ್ನೋದ್ರಲ್ಲಿ ಸತ್ಯಾಂಶ ಇಲ್ಲ. ಇಲ್ಲಿಂದ ಹೋದ ಮೇಲೆ ಸೋಮಣ್ಣ ಅವರನ್ನು ಕರೆದು ಮಾತಾಡುತ್ತೇನೆ. ಆ ರೀತಿಯ ಯಾವ ಭಿನ್ನಾಭಿಪ್ರಾಯವೂ ಇಲ್ಲ. ಎಲ್ಲರೂ ಒಟ್ಟಾಗಿದ್ದೇವೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಹೇಳಿದರು.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದಿಂದ ಕಾಂಗ್ರೆಸ್ ಗೆ ಸಚಿವರು, ಶಾಸಕರು ಸೇರುವ ಪ್ರಯತ್ನ ಯಾರೂ ಮಾಡುತ್ತಿಲ್ಲ. ಕಾಂಗ್ರೆಸ್ ನಿಂದ ಬರುವವರಿಗೆ ಸ್ವಾಗತ, ಹೋಗುವವರನ್ನು ಗೌರವಯುತವಾಗಿ ಕಳುಹಿಸಿಕೊಡುತ್ತೇವೆ ಎಂದರು.

ವಿ.ಸೋಮಣ್ಣ, ಡಿಕೆ ಶಿವಕುಮಾರ್ ಭೇಟಿಯಾಗಿದ್ದಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಡಿಕೆ ಶಿವಕುಮಾರ್ ಅವರು ಎಲ್ಲರನ್ನೂ ಕರೆದು ಮಾತನಾಡುವುದು ನಿರಂತರವಾಗಿ ಮಾಡುತ್ತಿದ್ದಾರೆ. ಆ ರೀತಿ ಯಾವುದಕ್ಕೂ ನಮ್ಮ ಮುಖಂಡರು ಬೆಲೆ ಕೊಡುತ್ತಿಲ್ಲ. ಯಾರೂ ಸಹ ಅವರ ಮಾತಿಗೆ ಬಲಿಯಾಗುವುದಿಲ್ಲ. ಕಾಂಗ್ರೆಸ್ ನವರಿಗೆ ಸೋಲಿನ ಭೀತಿ ಕಾಡುತ್ತಿದೆ. 17 ಜನರಲ್ಲೂ ಯಾರೊಬ್ಬರೂ ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಸೋಲಿನ ಭೀತಿಯಿಂದ ರಾಜ್ಯಕ್ಕೆ ಪದೇ ಪದೇ ಮೋದಿ, ಅಮಿತ್ ಶಾ ಬರುತ್ತಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರಯಿಕ್ರಿಯಿಸಿ, ಸಿದ್ದರಾಮಯ್ಯನವರು ಹಾಗೆ ಹೇಳಿರುವುದರಿಂದ ನಮಗೆ ತೊಂದರೆ ಇಲ್ಲ. ಅವರು ಬರುತ್ತಿರುವುದರಿಂದ ಕಾಂಗ್ರೆಸ್ ಗೆ ಸೋಲಿನ ಭೀತಿ ಜಾಸ್ತಿ ಆಗಿದೆ ಎನ್ನುವುದು ನಿಜ. ಅದನ್ನು ಅವರೇ ಒಪ್ಪಿಕೊಂಡಿದ್ದಾರೆ. ಅದಕ್ಕೆ ಸಂತೋಷ ಪಡುತ್ತೇನೆ ಎಂದು ತಿಳಿಸಿದರು.