ಬೆಂಗಳೂರು : ಸೋಮವಾರದಿಂದ ಶಾಲೆಗಳು ಪುನಾರಂಭವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಹೇಳಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೋವಿಡ್ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸೋಮವಾರದಿಂದ 1-9ನೇ ತರಗತಿಯ ಭೌತಿಕ ತರಗತಿಗಳು ಆರಂಭವಾಗಲಿದೆ. ಬೆಂಗಳೂರಿನಲ್ಲಿ ಸೋಮವಾರದಿಂದ ಶಾಲೆ ಪುನಾರಂಭವಾಗುತ್ತದೆ. ರಾಜ್ಯದ ಬೇರೆ ಬೇರೆ ಶಾಲೆಗೆ ನೀಡಿರುವ ಕೋವಿಡ್ ನಿಯಮಗಳ ಪಾಲನೆಯಲ್ಲಿ ಶಾಲೆಗಳು ಆರಂಭವಾಗುತ್ತವೆ. ಯಾವುದಾದರೂ ತರಗತಿಯಲ್ಲಿ ಮಕ್ಕಳಿಗೆ ಪಾಸಿಟಿವ್ ಬಂದರೆ, ಅಂತಹ ತರಗತಿ ಮಾತ್ರ ಬಂದ್ ಮಾಡಿ ಶಾಲೆ ನಡೆಸಬೇಕು. ಶಾಲೆಗಳಿಗೆ ರಜೆ ವಿಚಾರದಲ್ಲಿ ಜಿಲ್ಲಾಧಿಕಾರಿ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.
ರಾಜ್ಯದ ಪ್ರವಾಸಿತಾಣಗಳು ಪ್ರವಾಸಿಗರಿಗೆ ಮುಕ್ತವಾಗಿರಲಿವೆ. ಕೊವಿಡ್ ನಿಯಮ ಪಾಲಿಸಿ ಪ್ರವಾಸಿಗರು ಭೇಟಿ ನೀಡಬಹುದು. ಸಫಾರಿ ಸೇರಿದಂತೆ ಎಲ್ಲಾ ಚಟುವಟಿಕೆಗೆ ಅವಕಾಶ ಇರುತ್ತದೆ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.










