ಬೆಂಗಳೂರು : ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಹಿಜಾಬ್, ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರದ ಪರಿಸ್ಥಿತಿ ನೋಡಿಕೊಂಡು ಪಿಯು ಕಾಲೇಜು ಆರಂಭಿಸುವ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಮೀಸಲಾತಿ ಮರು ಪರೀಶಿಲನೆ ವಿಚಾರವಾಗಿ ಮಾತನಾಡಿ, ಸುಪ್ರೀಂಕೋರ್ಟ್ ಆದೇಶ ನೀಡಿದೆ. ಹೀಗಾಗಿ ಅಡ್ವೊಕೇಟ್ ಜನರಲ್ ಜೊತೆ ಚರ್ಚೆ ಮಾಡಿ ಸಭೆ ಕರೆಯಲಿದ್ದೇನೆ ಎಂದ ಅವರು, ಎರಡು ದಿನ ಶಿಗ್ಗಾಂವ ಪ್ರವಾಸಕ್ಕೆ ತೆರಳುತ್ತಿದ್ದೇನೆ. ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದೇನೆ ಎಂದರು.










