ಸೋಲಿನ ಹೊಣೆ ಹೊತ್ತು ಸಿಎಲ್‍ಪಿ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ…!

196
firstsuddi

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಚುನಾವಣೆಯ ಸೋಲಿನ ಹೊಣೆ ಹೊತ್ತು ತಮ್ಮ ಶಾಸಕಾಂಗ ಪಕ್ಷ ನಾಯಕನ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದಾರೆ. ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದ್ದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ನೀಡಿರುವ ತೀರ್ಪನ್ನು ನಾನು ಒಪ್ಪಿಕೊಳ್ಳುತ್ತೇನೆ. ಕುದುರೆ ವ್ಯಾಪಾರಕ್ಕೆ ಒಳಗಾದವರಿಗೆ ಮತದಾರರು ಶಿಕ್ಷೆ ನೀಡುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ಇಂದು ನನ್ನ ನಿರೀಕ್ಷೆ ಸುಳ್ಳಾಗಿದ್ದು, ಜನರ ತೀರ್ಪನ್ನು ಒಪ್ಪಿಕೊಳ್ಳುತ್ತೇನೆ. ನಾನು ಕಾಂಗ್ರೆಸ್ ಶಾಸಕಾಂಗ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದೇನೆ. ವಿಪಕ್ಷ ನಾಯಕನಾಗಿ ಮುಂದುವರೆಯುತ್ತೇನೆ. ನನ್ನ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ನೀಡಿದ್ದೇನೆ ಎಂದು ತಿಳಿಸಿದರು.