ದಾವಣಗೆರೆ : ಸ್ಕೂಟಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿಯಲ್ಲಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.
ಗುಜರಾತ್ ಮೂಲದ ಪ್ರಿಯಾಂಕಾ (26) ಮೃತ ವಿದ್ಯಾರ್ಥಿನಿ. ನಗರದ ಜೆಜೆಎಂ ಮೆಡಿಕಲ್ ಕಾಲೇಜ್ ನಲ್ಲಿ ವಿದ್ಯಾರ್ಥಿನಿಯಾಗಿದ್ದ ಪ್ರಿಯಾಂಕ ಸ್ಕೂಟಿಯಲ್ಲಿ ಬರುವಾಗ ಕಾರೊಂದು ಅನಿರೀಕ್ಷಿತವಾಗಿ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಸ್ಕೂಟಿಯಿಂದ ಕೆಳಗೆ ಬಿದ್ದ ಪ್ರಿಯಾಂಕಾ ತಲೆಗೆ ಪೆಟ್ಟು ಬಿದ್ದಿದ್ದು, ತೀವ್ರ ರಕ್ತ ಸ್ರಾವದಿಂದ ಬಳಲುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯದಲ್ಲೇ ಸಾವನ್ನಪ್ಪಿದ್ದಾರೆ.
ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










