ಸ್ಥಳೀಯ ಉದ್ಯೋಗಿಗಳಿಗೆ ಶೇ.75ರಷ್ಟು ಉದ್ಯೋಗವಕಾಶ – ತಡೆಯಾಜ್ಞೆ ರದ್ದುಗೊಳಿಸಿದ ಸುಪ್ರೀಂ.

56
firstsuddi

ನವದೆಹಲಿ: ಸ್ಥಳೀಯ ಉದ್ಯೋಗಿಗಳಿಗೆ ಖಾಸಗಿ ವಲಯದಲ್ಲೂ ಶೇ.75ರಷ್ಟು ಉದ್ಯೋಗವಕಾಶಗಳನ್ನು ಮೀಸಲಿಡಬೇಕೆಂದು ಹರಿಯಾಣ ಸರ್ಕಾರ ಕಾಯ್ದೆ ತಂದಿತ್ತು. ಈ ಕಾಯ್ದೆಗೆ ತಡೆ ನೀಡಿದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ.

ಈ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್ ಮತ್ತು ಪಿ.ಎಸ್ ನರಸಿಂಹ ನೇತೃತ್ವದ ನ್ಯಾಯಪೀಠ, ಸುಪ್ರೀಂ ಕೋರ್ಟ್ ಉದ್ಯೋಗಕ್ಕೆ ಬೇಕಾಗಿರುವ ಅರ್ಹತೆಯ ಬಗ್ಗೆ ವಿಚಾರಣೆ ನಡೆಸುವುದಿಲ್ಲ. ಈ ವಿಷಯದ ಕುರಿತು ಒಂದು ತಿಂಗಳೊಳಗೆ ತೀರ್ಮಾನಿಸುವಂತೆ ಹೈಕೋರ್ಟ್ ಗೆ ಸೂಚಿಸಿದೆ.

ಸ್ಥಳೀಯರಿಗೆ ಶೇ.75ರಷ್ಟು ಉದ್ಯೋಗ ಮೀಸಲಾತಿ ನೀಡುವ ಹಾಗೂ ಗರಿಷ್ಠ ಮಾಸಿಕ ವೇತನ 30,000 ರೂ. ನೀಡುವ ಕಾನೂನನ್ನು ಹರಿಯಾಣ ಸರ್ಕಾರ ರಚಿಸಿತ್ತು. ಹರಿಯಾಣ ಸರ್ಕಾರದ ಕಾನೂನಿಗೆ ಫೆಬ್ರವರಿ 3 ರಂದು ಹೈಕೋರ್ಟ್ ಮಧ್ಯಂತರ ತಡೆ ನೀಡಿತ್ತು. ಬಳಿಕ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಸರ್ಕಾರ ಈ ಬಗ್ಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಸುಪ್ರೀಂ ಕೋರ್ಟ್ ಈ ತಡೆಯಾಜ್ಞೆಯನ್ನು ತೆರವುಗೊಳಿಸಿದೆ.