ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಪ್ರಕಟ.. ಸಂಪೂರ್ಣ ವಿವರ ಇಲ್ಲಿದೆ…

67
firstsuddi

ಬೆಂಗಳೂರು : ತೀವ್ರ ಕುತೂಹಲ ಮೂಡಿಸಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ರಾಜ್ಯದ ವಿವಿಧ ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಗೆದ್ದಿದ್ದು ಎಷ್ಟು? ಎಂಬ ಸಂಪೂರ್ಣ ವಿವರ ಇಲ್ಲಿದೆ.

ಡಿಸೆಂಬರ್ 27ರಂದು ಐದು ನಗರಸಭೆಗಳಿಗೆ ಚುನಾವಣೆ ನಡೆದಿದ್ದು, ಇಂದು ಚುನಾವಣಾ ಫಲಿತಾಂಶ ಹೊರ ಬಿದ್ದಿದೆ. 5 ನಗರಸಭೆಗಳ ಪೈಕಿ 3 ಬಿಜೆಪಿ ಪಾಲಾಗಿದೆ. ಹಾಗೂ 2 ನಗರಸಭೆ ಅತಂತ್ರವಾಗಿದೆ. ಗದಗ-ಬೆಟಗೇರಿ ನಗರಸಭೆ, ಚಿಕ್ಕಮಗಳೂರು ನಗರಸಭೆ, ಬೆಂಗಳೂರಿನ ಹೆಬ್ಬಗೋಡಿ ನಗರಸಭೆ ಬಿಜೆಪಿ ಪಾಲಾಗಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ನಗರಸಭೆ, ತುಮಕೂರು ಜಿಲ್ಲೆಯ ಶಿರಾ ನಗರಸಭೆ ಫಲಿತಾಂಶ ಅತಂತ್ರವಾಗಿದೆ. 5 ನಗರಸಭೆಗಳ 166 ವಾರ್ಡ್ ಗಳ ಪೈಕಿ 67ರಲ್ಲಿ ಬಿಜೆಪಿ ಗೆಲುವು, ಕಾಂಗ್ರೆಸ್ 61, ಜೆಡಿಎಸ್ 12 ವಾರ್ಡ್‌ಗಳಲ್ಲಿ ಗೆದಿದ್ದು, 26 ವಾರ್ಡ್ ಗಳಲ್ಲಿ ಪಕ್ಷೇತರ ಅಭ್ಯರ್ಥಿಗಳಿಗೆ ಗೆಲುವು ಸಿಕ್ಕಿದೆ.

ಪುರಸಭೆಗಳ ಫಲಿತಾಂಶ ಪ್ರಕಟವಾಗಿದ್ದು, ಪುರಸಭೆಯ ಒಟ್ಟು 441 ಸ್ಥಾನಗಳ ಪೈಕಿ ಕಾಂಗ್ರೆಸ್ 201 ಸ್ಥಾನಗಳಲ್ಲಿ ಜಯಗಳಿಸಿದ್ದು, ಬಿಜೆಪಿ 176 ಸ್ಥಾನಗಳಲ್ಲಿ ಜಯಗಳಿಸಿದ್ದರೆ, ಜೆಡಿಎಸ್ 43 ಸ್ಥಾನಗಳನ್ನು ಗಳಿಸಿಕೊಂಡಿದೆ.

ಇನ್ನೂ ಪಟ್ಟಣ ಪಂಚಾಯಿತಿ ಚುನಾವಣಾ ಫಲಿತಾಂಶ ಕೂಡ ಪ್ರಕಟವಾಗಿದ್ದು, ಪಟ್ಟಣ ಪಂಚಾಯಿತಿಯ ಒಟ್ಟು 577 ಸ್ಥಾನಗಳ ಪೈಕಿ ಕಾಂಗ್ರೆಸ್ 236 ಸ್ಥಾನಗಳಲ್ಲಿ ಜಯಗಳಿಸಿದ್ದು, ಬಿಜೆಪಿ 194 ಸ್ಥಾನಗಳಲ್ಲಿ ಮಾತ್ರ ಜಯಗಳಿಸಿದೆ. ಹಾಗೂ ಕೇವಲ 12 ಸ್ಥಾನಗಳಲ್ಲಿ ಮಾತ್ರ ಜೆಡಿಎಸ್ ಗೆಲುವು ಸಾಧಿಸಿದೆ.