ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಮತ್ತೊಂದು ದೂರು, ಗಡಿಪಾರಿಗೆ ಆಗ್ರಹ.

24

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಕ್ರಮವಾಗಿ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್ ಇಂದು ಮತ್ತೊಂದು ದೂರು ದಾಖಲಿಸಿದೆ. ಸ್ನೇಹಮಹಿ ಕೃಷ್ಣ ಅವರನ್ನು ತಕ್ಷಣ ಬಂಧಿಸಿ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಮುಖಂಡರು ಇಂದು ಮೈಸೂರಿನ ಲಕ್ಷ್ಮಿಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ವೇಳೆ ಮಾತನಾಡಿದ ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ ಅವರು, ಎರಡು ತಿಂಗಳ ಹಿಂದೆ ಸ್ನೇಹಮಯಿ ಕೃಷ್ಣ ಅವರ ಸ್ನೇಹಿತರು ಎಂದು ಹೇಳಿಕೊಂಡು ಇಬ್ಬರು ನನ್ನನ್ನು ಸಂಪರ್ಕಿಸಿದ್ದರು. ಪ್ರಕರಣ ಮುಚ್ಚಿ ಹಾಕಲು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಮೂರು ದಿನದ ಹಿಂದೆ ಮತ್ತೆ ನನ್ನನ್ನು ಈ ಇಬ್ಬರೂ ಸಂಪರ್ಕಿಸಿದ್ದು, ನನಗೆ ಬೆದರಿಕೆ ಹಾಕಿದ್ದಾರೆ. ಸ್ನೇಹಮಯಿ ಕೃಷ್ಣ ವಿರುದ್ಧ ಆರೋಪ ಮುಂದುವರಿಸಿದರೆ ನಿಮ್ಮ ವಿರುದ್ಧವೂ ದಾಖಲೆ ಬಿಡುಗಡೆ ಮಾಡುತ್ತೇವೆ ಎಂದು ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರಿದರು.