ಸ್ನೇಹಿತನ ಬರ್ತ್ ಡೇ ಪಾರ್ಟಿಗೆ ಹೋಗಿದ್ದ ಯುವಕರಿಬ್ಬರು ನೀರುಪಾಲು..!

126
firstsuddi

ಮೈಸೂರು : ಸ್ನೇಹಿತನ ಬರ್ತ್ ಡೇ ಪಾರ್ಟಿಗೆ ಹೋಗಿದ್ದ ಯುವಕರಿಬ್ಬರು ನೀರುಪಾಲಾಗಿರುವ ಘಟನೆ ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ತಡಿಮಾಲಂಗಿ ಗ್ರಾಮದ ಬಳಿ ನಡೆದಿದ್ದು, ನೀರುಪಾಲಾದ ಯುವಕರನ್ನು ಅಭಿಷೇಕ್ (21) ಮತ್ತು ಅಂಕೇಶ್ (21) ಎಂದು ಗುರುತಿಸಲಾಗಿದೆ. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಕಿನಕಹಳ್ಳಿ ಗ್ರಾಮದ ನಿವಾಸಿಗಳಾದ ಈ ಇಬ್ಬರು ಯುವಕರು ಚಾಮರಾಜನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು.

ಸ್ನೇಹಿತನ ಹುಟ್ಟುಹಬ್ಬಕ್ಕೆಂದು ಜಿಲ್ಲೆಯ ತಡಿಮಾಲಂಗಿ ಗ್ರಾಮಕ್ಕೆ ಆಗಮಿಸಿದ್ದ ಇಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರುಪಾಲಾಗಿದ್ದಾರೆ. ಇಬ್ಬರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಘಟನೆ ಸಂಬಂಧ ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.