ಸ್ಪೀಕರ್ ಆದೇಶವನ್ನು ಎತ್ತಿ ಹಿಡಿದ ಸುಪ್ರೀಂ-ಅನರ್ಹರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅನುಮತಿ…

279
firstsuddi

ನವದೆಹಲಿ : 17 ಮಂದಿ ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸ್ಪೀಕರ್ ಆದೇಶವನ್ನು ಎತ್ತಿ ಹಿಡಿದಿದ್ದು, ಮುಂಬರುವ ಉಪಚುನಾವಣೆಯಲ್ಲಿ ಅನರ್ಹ ಶಾಸಕರು ಸ್ಪರ್ಧಿಸಬಹುದು ಎಂದು ತೀರ್ಪು ಪ್ರಕಟಿಸಿದೆ. ಸ್ಪೀಕರ್ ರಮೇಶ್ ಕುಮಾರ್ ಅವರ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾ.ಎನ್.ವಿ. ರಮಣ ನೇತೃತ್ವದ ತ್ರಿಸದಸ್ಯ ಪೀಠ 17 ಮಂದಿ ಶಾಸಕರನ್ನು ಸ್ಪೀಕರ್ ಅನರ್ಹತೆ ಮಾಡಿರುವುದು ಸರಿ. ಸ್ಪೀಕರ್ ಅವರಿಗೆ ಅನರ್ಹ ಮಾಡಲು ಮಾತ್ರ ಅಧಿಕಾರ ಇರುತ್ತದೆಯೇ ಹೊರತು ನಿರ್ದಿಷ್ಟ ಸಮಯವನ್ನು ನಿಗದಿ ಪಡಿಸುವ ಅಧಿಕಾರ ಇಲ್ಲ. ಹೀಗಾಗಿ ಅನರ್ಹ ಶಾಸಕರು ಉಪಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ತೀರ್ಪನ್ನು ಪ್ರಕಟಿಸಿದೆ.