ಹಾವೇರಿ : ಸ್ಮಶಾನದಲ್ಲಿ ಅಂತ್ಯಕ್ರಿಯೆ ಮಾಡಲು ವ್ಯಕ್ತಿಯೋರ್ವ ಅಡ್ಡಿಪಡಿಸಿದ ಹಿನ್ನಲೆ ಗ್ರಾಮ ಪಂಚಾಯತ್ ಎದುರೇ ಕುಟುಂಬಸ್ಥರು ಅಂತ್ಯಸಂಸ್ಕಾರ ಮಾಡಲು ಮುಂದಾದ ಘಟನೆ ರಾಣೆಬೆನ್ನೂರು ತಾಲ್ಲೂಕಿನ ಹರನಗಿರಿ ಗ್ರಾಮದಲ್ಲಿ ನಡೆದಿದೆ.
ಮದ ಹನುಮವ್ವ ಅಣ್ಣಿಗೇರಿ(45) ಇಂದು ಮೃತಪಟ್ಟ ಮಹಿಳೆ. ಮೃತಳ ಕುಟುಂಬಸ್ಥರು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಲು ಸ್ಮಶಾನಕ್ಕೆ ಕಟ್ಟಿಗೆ ತಗೆದುಕೊಂಡು ಹೋಗುತ್ತಿದ್ದರು. ಆಗ ವ್ಯಕ್ತಿಯೋರ್ವ ಮೃತಳ ಕುಟುಂಬದವರಿಗೆ ಅಡ್ಡಿಪಡಿಸಿದ್ದಾರೆ. ಸ್ಮಶಾನ ನಮ್ಮ ಹೆಸರಿನಲ್ಲಿದೆ, ನೀವು ಇಲ್ಲಿ ಅಂತ್ಯಸಂಸ್ಕಾರ ಮಾಡಬಾರದು ಎಂದಿದ್ದಾರಂತೆ. ಇದರಿಂದ ಕಂಗಾಲಾದ ಕುಟುಂಬಸ್ಥರು ಗ್ರಾಮ ಪಂಚಾಯತ್ ಕಚೇರಿಯ ಮುಂದೆ ಅಂತ್ಯಸಂಸ್ಕಾರ ಮಾಡಲು ಮುಂದಾಗಿದ್ದಾರೆ.
ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಕಂದಾಯ ಇಲಾಖೆ ಸಿಬ್ಬಂದಿ, ಅಧಿಕಾರಿಗಳು ಹಾಗೂ ಪೋಲಿಸರು ಸ್ಮಶಾನದಲ್ಲಿ ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡುವಂತೆ ಗ್ರಾಮದ ಜನರನ್ನು ಮನವೊಲಿಸಿದ್ದಾರೆ.










