ಸ್ಯಾಂಡಲ್​ವುಡ್​ಗೆ ಮತ್ತೆ ಎಂಟ್ರಿ ಕೊಟ್ಟ ಮೋಹಕ ತಾರೆ ರಮ್ಯಾ.

77
firstsuddi

ಮೋಹಕ ತಾರೆ ರಮ್ಯಾ ಅವರು ಸ್ಯಾಂಡಲ್​ವುಡ್​ಗೆ ಮತ್ತೆ ಎಂಟ್ರಿ ಕೊಡುತ್ತಿದ್ದಾರೆ. ಹೌದು, ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಮೂಲಕ ರಮ್ಯಾ ನಾಯಕಿಯಾಗಿ ಸ್ಯಾಂಡಲ್​ವುಡ್​ಗೆ ಮರು ಪ್ರವೇಶಿಸಿದ್ದಾರೆ.

ಈಗಾಗಲೇ ಕನ್ನಡ ಸಿನಿಮಾ ರಂಗಕ್ಕೆ ನಿರ್ಮಾಪಕಿಯಾಗಿ ಮತ್ತೆ ಕಮ್ ಬ್ಯಾಕ್ ಮಾಡಿರುವ ನಟಿ ರಮ್ಯಾ, ತಮ್ಮ ಸಂಸ್ಥೆಯ ಹೆಸರನ್ನು ಅನೌನ್ಸ್ ಮಾಡಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದರು. ಇದೀಗ ಆ್ಯಪಲ್ ಬಾಕ್ಸ್ ಚಿತ್ರ ನಿರ್ಮಾಣ ಸಂಸ್ಥೆಯಡಿ ಈ ಚಿತ್ರವನ್ನು ರಮ್ಯಾ ಅವರೇ ನಿರ್ಮಿಸುತ್ತಿದ್ದಾರೆ.

ಗರುಡ ಗಮನ ರಿಷಭ ವಾಹನದ ಮೂಲಕ ಮನೆಮಾತಾದ ರಾಜ್ ಬಿ ಶೆಟ್ಟಿ ಅವರು ನಿದೇಶಿಸುವ ಜೊತೆಗೆ ರಮ್ಯಾ ಜೊತೆ ಪ್ರಮುಖ ಪಾತ್ರದಲ್ಲಿ ಬಣ್ಣ ಹಚ್ಚಲಿದ್ದಾರೆ.