ಬೆಂಗಳೂರು : ಸ್ಯಾಂಡಲ್‍ವುಡ್‍ನ ಹಿರಿಯ ನಟ ಅಶೋಕ್ ರಾವ್ ಅವರು ನಿಧನರಾಗಿದ್ದಾರೆ.
ಕ್ಯಾನ್ಸರ್ ಕಾಯಿಲೆಯಿಂದ ಬಳಲುತಿದ್ದ ಅಶೋಕ್ ರಾವ್ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ರಾತ್ರಿ 12.30ಕ್ಕೆ ಕೊನೆಯುಸಿರೆಳೆದಿದ್ದಾರೆ. ನಟ ಅಶೋಕ್ ರಾವ್ ಅವರು ಪತ್ನಿ, ಮಗ ಹಾಗೂ ಸೊಸೆಯನ್ನು ಅಗಲಿದ್ದಾರೆ.
ಕನ್ನಡದ ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಶೋಕ್ ರಾವ್ ನಟಿಸಿದ್ದರು. ಡಾ. ರಾಜ್ಕುಮಾರ್ ಸೇರಿದಂತೆ ಅನೇಕ ಸ್ಟಾರ್ ಕಲಾವಿದರ ಜೊತೆ ಅಶೋಕ್ ರಾವ್ ತೆರೆ ಹಂಚಿಕೊಂಡಿದ್ದರು.










