ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ-ನಟಿಯರಿಗೆ ಇನ್ನೆರಡು ದಿನ ಜೈಲೇ ಗತಿ…!

202
firstsuddi

ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ ನಂಟು ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿದ್ದ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿಗೆ ಇಂದೂ ಕೂಡಾ ಜಾಮೀನು ಕೈತಪ್ಪಿದ್ದು, ಇನ್ನೆರಡು ದಿನ ಅವರಿಗೆ ಜೈಲೇ ಗತಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪರ ವಕೀಲರು ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೇಳಿದ ಹಿನ್ನೆಲೆ, ನಟಿಯರ ಜಾಮೀನು ಅರ್ಜಿ ವಿಚಾರಣೆಯನ್ನು 33ನೇ ಸೆಷನ್ಸ್ ನ್ಯಾಯಾಲಯ ಸೆ. 24ಕ್ಕೆ ಮುಂದೂಡಿಕೆ ಮಾಡಿದೆ.