ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ : ನಟಿ ರಾಗಿಣಿ ಮತ್ತೆ 5 ದಿನ ಸಿಸಿಬಿ ವಶಕ್ಕೆ…

152
firstsuddi

ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಅವರನ್ನು 1ನೇ ಎಸಿಎಂಎಂ ಕೋರ್ಟ್ ಮತ್ತೆ 5 ದಿನ ಸಿಸಿಬಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾ. ಜಗದೀಶ್ ನೇತೃತ್ವದ ಪೀಠ ನಟಿ ರಾಗಿಣಿ ಅವರನ್ನು 5 ದಿನ ಸಿಸಿಬಿ ವಶಕ್ಕೆ ನೀಡಿದ್ದಾರೆ. ಸಿಸಿಬಿ ಪರ ವಕೀಲರು ರಾಗಿಣಿ ಅವರು ನಾವು ಕೇಳಿದ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಿಲ್ಲ. ಡ್ರಗ್ಸ್ ಬಗ್ಗೆ ಕೇಳಿದ ಪ್ರಶ್ನೆಗಳಿಕೆ ಹಾರಿಕೆ ಉತ್ತರವನ್ನು ನೀಡಿದ್ದಾರೆ. ಹೀಗಾಗಿ 10 ದಿನ ನಮ್ಮ ಕಸ್ಟಡಿಗೆ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದರು. ವಾದವನ್ನು ಆಲಿಸಿದ ನ್ಯಾ. ಜಗದೀಶ್ ಅವರು ನಟಿ ರಾಗಿಣಿ ಅವರನ್ನು 5 ದಿನ ಸಿಸಿಬಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.