ಸ್ಯಾಂಡಲ್‍ವುಡ್ ಡ್ರಗ್ಸ್ ನಂಟು-ನಟಿ ಸಂಜನಾ ಗಲ್ರಾನಿ ನಿವಾಸದ ಮೇಲೆ ಸಿಸಿಬಿ ದಾಳಿ…

160
firstsuddi

ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿ ಅವರ ನಿವಾಸದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಇಂದಿರಾನಗರದಲ್ಲಿ ಇರುವ ನಟಿ ಸಂಜನಾ ಅವರ ನಿವಾಸದ ಮೇಲೆ ಇಂದು ಬೆಳ್ಳಂಬೆಳಗ್ಗೆ 3 ವಾಹನಗಳಲ್ಲಿ ಆಗಮಿಸಿದ 6ಕ್ಕೂ ಹೆಚ್ಚು ಮಂದಿ ಅಧಿಕಾರಿಗಳ ತಂಡ ದಾಳಿ ನಡೆಸಿ ಮನೆಯನ್ನು ತಪಾಸಣೆ ನಡೆಸುತ್ತಿದ್ದಾರೆ. ದಾಳಿ ವೇಳೆ ನಟಿ ಸಂಜನಾ ಗಲ್ರಾನಿ ಅವರಿಗೆ ಸೇರಿದ ಮೂರು ಮೊಬೈಲ್ ಫೋನ್ ಹಾಗೂ ಕೆಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.