ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣ-ನಟಿಯರಿಗೆ ಇಂದೂ ಸಿಗಲಿಲ್ಲ ಜಾಮೀನು ಭಾಗ್ಯ…

142
firstsuddi

ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜೈಲುಪಾಲಾಗಿರುವ ನಟಿಯರಾದ ಸಂಜನಾ ಗಲ್ರಾನಿ ಹಾಗೂ ರಾಗಿಣಿ ದ್ವಿವೇದಿ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಇನ್ನು ಕೆಲವು ದಿನಗಳ ಕಾಲ ನಟಿಯರಿಗೆ ಜೈಲೇ ಗತಿಯಾಗಿದೆ. ಡ್ರಗ್ಸ್ ಪ್ರಕರಣದಲ್ಲಿ ಕಳೆದ ಎರಡು ತಿಂಗಳಿನಿಂದ ಜೈಲುವಾಸ ಅನುಭವಿಸುತ್ತಿರುವ ಇಬ್ಬರು ನಟಿಯರು ಹಾಗೂ ಇತರೆ ನಾಲ್ವರು ಆರೋಪಿಗಳು ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಿದ್ದರು. ಅ. 24ರಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರ ಪೀಠ ತೀರ್ಪನ್ನು ಕಾಯ್ದಿರಿಸಿತ್ತು. ಈ ಕುರಿತು ನ್ಯಾಯಾಲಯ ಇಂದು ತೀರ್ಪನ್ನು ಪ್ರಕಟಿಸಿದ್ದು, ಆರೋಪಿಗಳ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದ್ದು, ನಟಿಯರಿಗೆ ಜೈಲೇ ಗತಿಯಾಗಿದೆ.