ಬೆಂಗಳೂರು : ಸ್ಯಾಂಡಲ್‍ವುಡ್‍ನ ರಾಕಿಂಗ್ ಜೋಡಿ ಯಶ್ ಮತ್ತು ರಾಧಿಕ ಪಂಡಿತ್ ಅವರು ಇಂದು ತಮ್ಮ ಮಗನಿಗೆ ನಾಮಕರಣ ಮಾಡಿದ್ದಾರೆ. ತಮ್ಮ ಮಗನಿಗೆ 10 ತಿಂಗಳ ಬಳಿಕ ನಾಮಕರಣ ಮಾಡಿದ್ದು, ಮಗನಿಗೆ ಯಥರ್ವ್ ಯಶ್ ಎಂದು ಹೆಸರಿಟ್ಟಿದ್ದಾರೆ. ನಾಮಕರಣ ಸಮಾರಂಭದ ವೀಡಿಯೋವನ್ನು ಯಶ್ ಹಾಗೂ ರಾಧಿಕ ಪಂಡಿತ್ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಕೋವಿಡ್ ನಿಯಮದಂತೆ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಿದ್ದು, ಕಾರ್ಯಕ್ರಮದಲ್ಲಿ ಎರಡು ಕುಟುಂಬದವರು ಹಾಗೂ ಆಪ್ತರಷ್ಟೇ ಭಾಗಿಯಾಗಿದ್ದರು.










