ಬೆಂಗಳೂರು : ಸ್ಯಾಂಡಲ್ ವುಡ್ ನಟ ನೀನಾಸಂ ಸತೀಶ್ ಅವರ ತಾಯಿ ಚಿಕ್ಕತಾಯಮ್ಮ ನಿಧನರಾಗಿದ್ದಾರೆ.
ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಚಿಕ್ಕತಾಯಮ್ಮ ಅವರಿಗೆ 80 ವರ್ಷ ವಯಸ್ಸಾಗಿತ್ತು. ಇಂದು ಮುಂಜಾನೆ ಆರ್.ಆರ್ ನಗರದಲ್ಲಿರುವ ನಿವಾಸದಲ್ಲಿ ಇಹಲೋಕ ತ್ಯಜಿಸಿದ್ದು, ಮದ್ದೂರಿನ ಯಲದಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಚಿಕ್ಕ ತಾಯಮ್ಮರ ಅಗಲಿಕೆಗೆ, ನೀನಾಸಂ ಅವರ ಸ್ನೇಹಿತರು ಹಾಗೂ ಸಿನಿಮಾರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.










