ಸ್ವಯಂ ನಿವೃತ್ತಿ ಕೋರಿ ಅರ್ಜಿ ಸಲ್ಲಿಸಿದ ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್…

96
firstsuddi

ಬೆಂಗಳೂರು : ಪ್ರಸಕ್ತ ರೈಲ್ವೆ ಇಲಾಖೆಯ ಪೊಲೀಸ್ ಎಡಿಜಿಪಿಯಾಗಿರುವ ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಸ್ವಯಂ ನಿವೃತ್ತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಡಿಜಿಪಿ ಮತ್ತು ಐಜಿಪಿ ಪ್ರವೀಣ್ ಸೂದ್ ಮತ್ತು ಸರ್ಕಾರಕ್ಕೆ ಪತ್ರ ಬರೆದು ಭಾಸ್ಕರ್ ರಾವ್ ತನ್ನ ನಿರ್ಧಾರವನ್ನು ತಿಳಿಸಿದ್ದಾರೆ. ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿ ಇರುವಾಗಲೇ ಭಾಸ್ಕರ್ ರಾವ್ ಅವರು ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದು, ಅವರ ಈ ದಿಢೀರ್ ನಿರ್ಧಾರಕ್ಕೆ ಕಾರಣ ತಿಳಿದುಬಂದಿಲ್ಲ.