ಚಿಕ್ಕಮಗಳೂರು : ಹಣಕಾಸಿನ ವಿಚಾರಕ್ಕೆ ಸ್ನೇಹಿತರೇ ಗೆಳೆಯನನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ತರೀಕೆರೆ ಪಟ್ಟಣದ ಎಪಿಎಂಸಿ ಯಾರ್ಡ್ ನಲ್ಲಿ ನಡೆದಿದೆ. ಓಂಕಾರ್(30) ಮೃತ ದುರ್ದೈವಿ.
ನಿನ್ನೆ ರಾತ್ರಿ 10.30ರ ಸುಮಾರಿಗೆ ಮನೆಯಲ್ಲಿದ್ದ ಓಂಕಾರನನ್ನು ಸ್ನೇಹಿತರೇ ಕರೆದುಕೊಂಡು ಬಂದಿದ್ದರು. ಎಪಿಎಂಸಿ ಯಾರ್ಡ್ ನಲ್ಲಿ ಮಾತುಕತೆ ಮಾಡುವ ವೇಳೆ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಆರೋಪಿಗಳು ಹಾಗೂ ಕೊಲೆಯಾದ ಓಂಕಾರ ಎಲ್ಲರೂ ಸ್ನೇಹಿತರಾಗಿದ್ದು ಫೈನಾನ್ಸ್ ವ್ಯವಹಾರ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಕೊಲೆ ಸಂಬಂಧ ಧನರಾಜ್, ವಿಜಯ್ ಹಾಗೂ ಸುನಿಲ್ ಎಂಬ ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದು, ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ. ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










