ಉಡುಪಿ : ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಪ್ರಕರಣದಲ್ಲಿ ಪಿ.ಎಫ್.ಐ. ಮತ್ತು ಎಸ್.ಡಿ.ಪಿ.ಐ ಸಂಘಟನೆಗಳ ಕೈವಾಡ ಇರುವ ಮಾಹಿತಿ ಇದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಹೇಳಿದರು.
ಅವರು ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಯೋಗಿ ಸರಕಾರ ಮತ್ತು ಬಿಜೆಪಿ ಸರಕಾರದ ಹೆಸರು ಕೆಡಿಸುವ ಪ್ರಯತ್ನ ನಡೆದಿದೆ. ಈ ಪ್ರಕರಣದಲ್ಲಿ ಪಿ.ಎಫ್.ಐ. ಮತ್ತು ಎಸ್.ಡಿ.ಪಿ.ಐ ಕೈವಾಡ ಇದೆ ಎಂಬ ಮಾಹಿತಿ ಇದೆ. ಈ ಬಗ್ಗೆ ಸೂಕ್ತ ತನಿಖೆಯಾಗಬೇಕು. ಸಮಾಜದಲ್ಲಿ ಪ್ರಕ್ಷುಬ್ದತೆ ಉಂಟು ಮಾಡಿ ಸಮಾಜವನ್ನು ಒಡೆಯುವ ಕೆಲಸ ಮಾಡಲಾಗುತ್ತಿದೆ. ಇದನ್ನು ಎರಡು ಸಂಸ್ಥೆಗಳನ್ನು ನಿಷೇಧ ಮಾಡಬೇಕು ಹಾಗೂ ಇಂತಹ ಘಟನೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಬಲವಾದ ಕಾನೂನು ರೂಪುಗೊಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅತ್ಯಾಚಾರ ಪ್ರಕರಣದಲ್ಲಿ ಯಾರೇ ಆರೋಪಿಯಾಗಿದ್ದರೂ ಕೂಡ ಅವರಿಗೆ ಕಠಿಣ ಶಿಕ್ಷೆಯಾಗಬೇಕು ಅಲ್ಲಿ ಯಾವುದೇ ಜಾತಿ ಅನ್ನೋದಿಲ್ಲ ಇದೊಂದು ಮನಸ್ಥಿತಿಯಾಗಿದೆ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಮತ್ತು ಪ್ರಕರಣವನ್ನು ಎನ್ ಐ ಎ ಮೂಲಕ ತನಿಖೆ ನಡೆಸಬೇಕು ಎಂದರು.










