ಹದ್ದನ್ನು ಗಿಣಿಯೆಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು, ಕುಕ್ಕದೇ ಬಿಡುತ್ತಾ?: ಸಿದ್ದರಾಮಯ್ಯ.

264
firstsuddi

ಬೆಂಗಳೂರು : ಸಿದ್ದರಾಮಯ್ಯನವರು ಸಾಕಿದ ಗಿಣಿಗಳೇ ಅವರನ್ನು ಹದ್ದಾಗಿ ಕುಕ್ಕಿದ್ದವು ಎಂಬ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ ತಿರುಗೇಟು ನೀಡಿದ್ದಾರೆ. ಹೌದು, ಹೆಚ್.ಡಿ. ಕುಮಾರಸ್ವಾಮಿ ಅವರೇ, ನಾನೇ ನಂಬಿದ ಗಿಣಿಗಳು ಹದ್ದಾಗಿ ಕಾಡಿದ್ದು ನಿಜ. ನನ್ನದೇ ತಪ್ಪು, ನಾಲ್ಕು ದಶಕಗಳ ರಾಜಕೀಯ ಒಡನಾಟದ ಅನುಭವದ ನಂತರವೂ ಹದ್ದನ್ನು ಗಿಣಿಯೆಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು. ಕುಕ್ಕದೇ ಬಿಡುತ್ತಾ? ಅನುಭವಕ್ಕಿಂತ ದೊಡ್ಡ ಪಾಠ ಏನಿದೆ ಹೇಳಿ? ಎಂದು ತಿರುಗೇಟು ನೀಡಿದ್ದಾರೆ.