ಮೈಸೂರು : ಜಿಲ್ಲೆಯ ಹುಣಸೂರಿನಲ್ಲಿ ಇಂದು ಹನುಮ ಜಯಂತಿ ಹಿನ್ನೆಲೆ ಹುಣಸೂರು ಪಟ್ಟಣದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಾಗೂ ಹುಣಸೂರು ತಾಲೂಕಿನಾದ್ಯಂತ ಮೂರು ದಿನ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಹುಣಸೂರಿನ ಜೆಎಲ್ ಬಿ ರಸ್ತೆ ಬಜಾರ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಿರ್ಬಂಧ ಹೇರಲಾಗಿದೆ. ಎಲ್ಲಾ ರೀತಿಯ ವಾಹನಗಳಿಗೆ ನಿರ್ಬಂಧ ವಿಧಿಸಿ ಹುಣಸೂರು ಉಪವಿಭಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಎಸ್ ಪಿ ಆರ್ ಚೇತನ್ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಹುಣಸೂರಿನಲ್ಲಿ ಭದ್ರತೆಗೆ 1,700ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಹುಣಸೂರಿನ 70 ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಪೊಲೀಸರು ಈಗಾಗಲೇ ಎಲ್ಲಾ ಸಮುದಾಯಗಳ ಪ್ರಮುಖರ ಜೊತೆ ಶಾಂತಿ ಸಭೆ ನಡೆಸಿದ್ದಾರೆ.
ಹನುಮ ಮೆರವಣಿಗೆ ವೇಳೆ ಡಿಜೆ ಬಳಕೆಗೆ ಅವಕಾಶ ಇಲ್ಲ. ಸಂಜೆ 5 ಗಂಟೆಯವರೆಗೆ ಮಾತ್ರ ಮೆರವಣಿಗೆ ಮಾಡಲು ಅವಕಾಶ ನೀಡಲಾಗಿದೆ. ನಿಗದಿತ ಸ್ಥಳಗಳಲ್ಲಿ ಮಾತ್ರ ಬಾವುಟ, ಫ್ಲೆಕ್ಸ್ ಅಳವಡಿಕೆಗೆ ಅವಕಾಶ ನೀಡಲಾಗಿದೆ.










