ಹಬ್ಬಕ್ಕೂ ಮುನ್ನ ದೇಶದ ಜನತೆಗೆ ಬಿಗ್‍ಶಾಕ್! ಇಂದಿನಿಂದ LPG ಸಿಲಿಂಡರ್ ಬೆಲೆ ಭಾರೀ ಏರಿಕೆ!.

44

LPG Cylinder Price Hike: ದೇಶದ ಜನತೆಗೆ ಅಕ್ಟೋಬರ್ ತಿಂಗಳ ಮೊದಲ ದಿನವೇ ಭರ್ಜರಿ ಶಾಕ್ ತಟ್ಟಿದೆ. ಗ್ಯಾಸ್ ಸಿಲಿಂಡರ್ ಬೆಲೆ ಇಂದಿನಿಂದ ಭರ್ಜರಿ ಏರಿಕೆಯಾಗಿದ್ದು, ಅಕ್ಟೋಬರ್‌ನಲ್ಲಿ ನವರಾತ್ರಿ, ದಸರಾ ಮತ್ತು ದೀಪಾವಳಿಯಂತಹ ಹಬ್ಬಗಳಿರುವುದರಿಂದ ಜನರ ಜೇಬಿಗೆ ಕತ್ತರಿ ಬೀಳಲಿದೆ. ಎಲ್ಲೆಲ್ಲಿ ಯಾವ ಗ್ಯಾಸ್ ಬೆಲೆ ಏರಿಕೆಯಾಗಿದೆ ಅನ್ನೋದರ ವಿವರ ಇಲ್ಲಿದೆ. ಗ್ಯಾಸ್ ಸಿಲಿಂಡರ್ ಬೆಲೆ ಇಂದಿನಿಂದಲೇ ಭರ್ಜರಿ ಏರಿಕೆಯಾಗಿದ್ದು, ತೈಲ ಮಾರುಕಟ್ಟೆ ಕಂಪನಿಗಳು ಸಿಲಿಂಡರ್ ಬೆಲೆ ಏರಿಕೆ ಮಾಡಲು ನಿರ್ಧರಿಸಿರುವುದರಿಂದ ಜನರ ಜೇಬಿಗೆ ಕತ್ತರಿ ಬೀಳಲಿದೆ. ಎಲ್ಲೆಲ್ಲಿ ಯಾವ ಗ್ಯಾಸ್ ಬೆಲೆ ಏರಿಕೆಯಾಗಿದೆ ಅನ್ನೋದರ ವಿವರ ಇಲ್ಲಿದೆ. ಅಂದಹಾಗೆ, LPG ಬೆಲೆಗಳಲ್ಲಿನ ಆಗಾಗ್ಗೆ ಏರಿಳಿತಗಳು ಮಾರುಕಟ್ಟೆಯ ಕ್ರಿಯಾತ್ಮಕ ಸ್ವರೂಪವನ್ನು ಪ್ರತಿಬಿಂಬಿಸುತ್ತವೆ, ಇದು ಅಂತರರಾಷ್ಟ್ರೀಯ ತೈಲ ಬೆಲೆಗಳು, ತೆರಿಗೆ ನೀತಿಗಳು ಮತ್ತು ಪೂರೈಕೆ-ಬೇಡಿಕೆ ಡೈನಾಮಿಕ್ಸ್ ನಂತಹ ಅಂಶಗಳಿಂದ ಪ್ರಭಾವಿತವಾಗಿರುತ್ತದೆ. ಇತ್ತೀಚಿನ ಬೆಲೆ ಏರಿಕೆಯ ಹಿಂದಿನ ನಿಖರವಾದ ಕಾರಣಗಳನ್ನು ಬಹಿರಂಗಪಡಿಸಲಾಗಿಲ್ಲವಾದರೂ, ತೈಲ ಮಾರುಕಟ್ಟೆ ಕಂಪನಿಗಳು ಬದಲಾಗುತ್ತಿರುವ ಮಾರುಕಟ್ಟೆ ಪರಿಸ್ಥಿತಿಗಳಿಗೆ ಪ್ರತಿಕ್ರಿಯಿಸುತ್ತಿವೆ ಎಂಬುದು ಸ್ಪಷ್ಟವಾಗಿದೆ. ಈ ಬಾರಿ ಸಾಲು ಸಾಲು ಹಬ್ಬಗಳು ಇರುವುದರಿಂದ ಇಂದು ಸಿಲಿಂಡರ್ ಬೆಲೆ ಗಣನೀಯವಾಗಿ ಇಳಿಕೆಯಾಗಬಹುದು ಎಂದು ಹಲವರು ಭವಿಷ್ಯ ನುಡಿದಿದ್ದರು. ಆದರೆ ಕಳೆದ 3 ತಿಂಗಳಿನಂತೆ ಈ ಬಾರಿಯೂ ಸಿಲಿಂಡರ್ ಬೆಲೆಯಲ್ಲಿ ಏರಿಕೆ ಉಂಟಾಗಿದ್ದು, ಪರಿಷ್ಕೃತ ದರಗಳು ಇಂದಿನಿಂದಲೇ ಜಾರಿಗೆ ಬಂದಿವೆ. ಬೆಲೆ ಕಡಿತದ ನಿರೀಕ್ಷೆಯಲ್ಲಿದ್ದ ಜನರಿಗೆ ಶಾಕ್ ತಟ್ಟಿದೆ. ಅಂದಹಾಗೆ ಈ ಬೆಲೆ ಏರಿಕೆಯು ಒಂದು ವರ್ಗಕ್ಕೆ ಸೀಮಿತವಾಗಿದ್ದು, ಬೆಲೆ ಏರಿಕೆಯಿಂದ ಯಾರ ಜೇಬಿಗೆ ಕತ್ತರಿ ಬೀಳಲಿದೆ ಅನ್ನೋದನ್ನು ಇಲ್ಲಿ ಕೊಡಲಾಗಿದೆ. ಅಕ್ಟೋಬರ್ ತಿಂಗಳಲ್ಲಿ ಹಬ್ಬ ಹರಿದಿನಗಳಿದ್ದು, ಈ ತಿಂಗಳ ಮೊದಲ ದಿನವೇ ಗ್ಯಾಸ್ ಬೆಲೆ ಏರಿಕೆಯಾಗಿದೆ. 19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಪ್ರತ ಸಿಲಿಂಡರ್ ಗೆ ಬರೋಬ್ಬರಿ 48.50 ರೂಪಾಯಿ ಏರಿಕೆಯಾಗಿದ್ದು, LPG ಸಿಲಿಂಡರ್‌ಗಳ ಹೊಸ ದರಗಳು ಇಂದು 1 ಅಕ್ಟೋಬರ್ 2024 ರಿಂದಲೇ ದೇಶಾದ್ಯಂತ ಜಾರಿಗೆ ಬಂದಿವೆ. ದೇಶದ ಪ್ರಮುಖ ನಗರಗಳಲ್ಲಿ ಗ್ಯಾಸ್ ಬೆಲೆ ಎಷ್ಟು ಹೆಚ್ಚಾಗಿದೆ ಎಂಬುದರ ವಿವರ ಈ ಕೆಳಗಿನಂತಿದೆ.
ದೇಶದ ರಾಜಧಾನಿ ದೆಹಲಿಯಲ್ಲಿ 19 ಕೆಜಿ ಎಲ್‍ಪಿಜಿ ಸಿಲಿಂಡರ್ ದರ ಈಗ 1740 ರೂ ಆಗಿದ್ದು, 48.50 ರೂಪಾಯಿ ಏರಿಕೆಯಾಗಿದೆ. ಕಳೆದ ತಿಂಗಳು ಸೆಪ್ಟೆಂಬರ್‌ನಲ್ಲಿ ಇದರ ಬೆಲೆ 1691.50 ರೂಪಾಯಿ ಆಗಿತ್ತು. ಕೋಲ್ಕತ್ತಾದಲ್ಲಿ 19 ಕೆಜಿ ಎಲ್‍ಪಿಜಿ ಸಿಲಿಂಡರ್ ಬೆಲೆ ಈಗ 1850.50 ರೂಪಾಯಿಗೆ ಏರಿಕೆಯಾಗಿದ್ದು, ಕಳೆದ ತಿಂಗಳು ಸೆಪ್ಟೆಂಬರ್‌ನಲ್ಲಿ 1802.50 ರೂಪಾಯಿಗೆ ಲಭ್ಯವಿತ್ತು.
ಮುಂಬೈನಲ್ಲಿ ಎಲ್‍ಪಿಜಿ ಸಿಲಿಂಡರ್ ಬೆಲೆ 48 ರೂಪಾಯಿ ಏರಿಕೆಯಾಗಿ ಈಗ 1692 ರೂ ಆಗಿದೆ. ಕಳೆದ ತಿಂಗಳು ಸೆಪ್ಟೆಂಬರ್‌ನಲ್ಲಿ ಇದರ ದರಗಳು 1644 ರೂಪಾಯಿ ಇತ್ತು. ಚೆನೈನಲ್ಲಿ 19 ಕೆಜಿ ಎಲ್‍ಪಿಜಿ ಸಿಲಿಂಡರ್ ದರ ಈಗ 1903 ರೂ ಆಗಿದ್ದು, 48 ರೂ ಏರಿಕೆಯಾಗಿದೆ. ಕಳೆದ ತಿಂಗಳು ಸೆಪ್ಟೆಂಬರ್‌ನಲ್ಲಿ ಇದರ ದರಗಳು 1855 ರೂಪಾಯಿ ಇತ್ತು.
ಇನ್ನು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಬೆಲೆಯು 48.50 ರೂಪಾಯಿ ಬೆಲೆ ಏರಿಕೆ ಕಂಡುಬಂದಿದ್ದು 1,818 ರೂಪಾಯಿಗೆ ತಲುಪಿದೆ. ಬೆಲೆ ಪರಿಷ್ಕರಣೆಗೂ ಮುನ್ನ ಬೆಲೆಯು 19 KG ಪ್ರತಿ ಸಿಲಿಂಡರ್‌ಗೆ 1,769.50 ರೂಪಾಯಿಗಳಷ್ಟಿತ್ತು.
ಆದರೆ ಸಮಧಾನದ ಸಂಗತಿಯೆಂದರೆ ಗೃಹಬಳಕೆಯ 14.2 ಕೆಜಿ ತೂಕದ ಸಾಮಾನ್ಯ ಎಲ್‍ಪಿಜಿ ಸಿಲಿಂಡರ್ ದರದಲ್ಲಿ ಯಾವುದೇ ಹೆಚ್ಚಳವಾಗಿಲ್ಲ. ಆದರೆ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿನ ಹೆಚ್ಚಳದಿಂದಾಗಿ, ರೆಸ್ಟೋರೆಂಟ್‍ಗಳು, ಹೋಟೆಲ್‍ಗಳು, ಧಾಬಾಗಳಲ್ಲಿ ಆಹಾರದ ದರಗಳು ಹೆಚ್ಚಾಗಬಹುದು. ಏಕೆಂದರೆ ಈ ಸ್ಥಳಗಳಲ್ಲಿ ವಾಣಿಜ್ಯ LPG ಗ್ಯಾಸ್ ಅನ್ನು ಪ್ರತ್ಯೇಕವಾಗಿ ಬಳಸಲಾಗುತ್ತದೆ. ಈ ಬಾರಿ ಅಕ್ಟೋಬರ್ ಸೇರಿದಂತೆ ಸತತ ಮೂರನೇ ತಿಂಗಳು ವಾಣಿಜ್ಯ ಬಳಕೆಯ ಗ್ಯಾಸ್ ದರ ಏರಿಕೆಯಾಗಿದ್ದು, ಸರ್ಕಾರಿ ತೈಲ ಮತ್ತು ಅನಿಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‍ಪಿಜಿ ಸಿಲಿಂಡರ್‍ಗಳ ದರವನ್ನು ಹೆಚ್ಚಿಸಿವೆ. ಈ ಹಿಂದೆ ಸೆಪ್ಟೆಂಬರ್ ಮತ್ತು ಆಗಸ್ಟ್ ನಲ್ಲಿಯೂ ಗ್ಯಾಸ್ ದರವನ್ನು ಹೆಚ್ಚಿಸಲಾಗಿತ್ತು. ಸೆಪ್ಟೆಂಬರ್‌ನಲಿ 39 ರೂ., ಆಗಸ್ಟ್‍ನಲ್ಲಿ 8-9 ರೂ.ಗಳಷ್ಟು ಸ್ವಲ್ಪ ಹೆಚ್ಚಳವಾಗಿದೆ.