ಶಿವಮೊಗ್ಗ : ಹತ್ಯೆಯಾದ ಹಿಂದೂಪರ ಸಂಘಟನೆಯ ಕಾರ್ಯಕರ್ತ ಹರ್ಷನ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಈಶ್ವರಪ್ಪನವರು, ಹರ್ಷ ಕೊಲೆಯ ಬಗ್ಗೆ ಬೊಮ್ಮಯಿ ಅವರು ದುಃಖವನ್ನು ವ್ಯಕ್ತಪಡಿಸಿದ್ದಾರೆ. ನನ್ನ ಜೊತೆ ದೂರವಾಣಿಯಲ್ಲಿ ಮಾತನಾಡಿ ಹರ್ಷನ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಮಾರ್ಚ್ 6ರಂದು ಹರ್ಷನ ಮನೆಗೆ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ನಾನು ಹೋಗಿ 25 ಲಕ್ಷ ರೂ ಪರಿಹಾರ ನೀಡುತ್ತೆವೆ ಎಂದು ಹೇಳಿದ್ದಾರೆ.
ಮೆರವಣಿಗೆಯ ವೇಳೆ ಹಾನಿಗೊಳಗಾದ ಅಂಗಡಿಯವರಿಗೆ ಸರ್ಕಾರ ಪರಿಹಾರ ನೀಡುತ್ತದೆ ಎಂದು ಭರವಸೆ ನೀಡಿದರು.
ಹರ್ಷನ ಹತ್ಯೆಯ ಬಳಿಕ ಶಿವಮೊಗ್ಗ ನಗರದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ನಂತರ ಜಿಲ್ಲಾಡಳಿತ ಒಂದು ವಾರದ ಕಾಲ ನಿಷೇಧಾಜ್ಞೆ ಘೋಷಿಸಿತ್ತು. ಇದೀಗ ನಗರ ಸಹಜ ಸ್ಥಿತಿಗೆ ಮರಳಿದೆ.










