ಹರ್ಷ ಹತ್ಯೆ ಪ್ರಕರಣ ಎನ್ಐಎಗೆ ಹಸ್ತಾಂತರ…

108
firstsuddi

ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ತನಿಖೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ತನಿಖಾ ದಳ(ಎನ್ಐಎ)ಕ್ಕೆ ಹಸ್ತಾಂತರಿಸಿದೆ.

ಫೆಬ್ರವರಿ 20 ರಂದು ಶಿವಮೊಗ್ಗದ ಸೀಗೆಹಟ್ಟಿಯಲ್ಲಿ ನಡೆದಿದ್ದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 10 ಆರೋಪಿಗಳನ್ನು ಬಂಧಿಸಲಾಗಿದ್ದು, ಇವರೆಲ್ಲರೂ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಶೀಘ್ರದಲ್ಲಿಯೇ ಶಿವಮೊಗ್ಗಕ್ಕೆ ಎನ್ ಐಎ ಅಧಿಕಾರಿಗಳು ಆಗಮಿಸಲಿದ್ದಾರೆ.

ಈಗಾಗಲೇ ಹರ್ಷ ಕೊಲೆ ಆರೋಪಿಗಳ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆ ಅನ್ವಯ ಪ್ರಕರಣ ದಾಖಲಾಗಿದೆ. ಯುಎಪಿಎ ಕಾಯ್ದೆಯ ಅನ್ವಯ ಪ್ರಕರಣಗಳನ್ನು ಸಾಮಾನ್ಯವಾಗಿ ದೇಶದ ಏಕತೆಗೆ ಭಂಗ ತರುವ ಉದ್ದೇಶದಿಂದ ಸಂಚು ನಡೆಸುವವರ ವಿರುದ್ಧ ದಾಖಲಿಸಲಾಗುತ್ತದೆ. ಈ ಕೊಲೆಯ ಹಿಂದೆ ದೊಡ್ಡಮಟ್ಟದ ಸಂಚು ಇರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಪ್ರಕರಣವನ್ನು ಎನ್ ಐಎಗೆ ಹಸ್ತಾಂತರಿಸಲು ಸರ್ಕಾರ ನಿರ್ಧರಿಸಿತು.