ನವದೆಹಲಿ : ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಬ್ಯಾಂಕಿಂಗ್ ವಲಯದ ಸುಧಾರಣಾ ಕ್ರಮಗಳನ್ನು ಘೋಷಣೆ ಮಾಡಿದರು. ಮುಂದಿನ ಪೀಲಿಗೆಯ ಬಹುದೊಡ್ಡ ಬ್ಯಾಂಕ್‍ಗಳನ್ನು ಸೃಷ್ಟಿ ಮಾಡಲು ನಮ್ಮ ಸರ್ಕಾರ ಶ್ರಮಿಸುತ್ತಿದೆ. 2017 ರಲ್ಲಿ ಒಟ್ಟು 17 ಸಾರ್ವಜನಿಕ ವಲಯದ ಬ್ಯಾಂಕ್‍ಗಳು ಇದ್ದವು. ಇದನ್ನು 13 ಕ್ಕೆ ಇಳಿಸುವ ಸಲುವಾಗಿ ಬ್ಯಾಂಕ್‍ಗಳ ವಿಲೀನ ಪ್ರಕ್ರಿಯೆ ನಡೆಯಲಿದೆ. ಸಾರ್ವಜನಿಕ ವಲಯದ ಬ್ಯಾಂಕ್‍ಗಳನ್ನು ವಿಲೀನಗೊಳಿಸುವ ಮೂಲಕ 5 ಟ್ರೆಲಿಯನ್ ಗುರಿ ತಲುಪಲು ಕೇಂದ್ರ ಸರ್ಕಾರ ಎಲ್ಲಾ ರೀತಿಯ ಆರ್ಥಿಕ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲು 10 ಬ್ಯಾಂಕ್‍ಗಳನ್ನು ವಿಲೀನ ಪ್ರಕ್ರಿಯೆಗೆ ಒಳಪಡಿಸಲಾಗಿದೆ. ಪಂಜಾಬ್‍ನ ನ್ಯಾಷನಲ್ ಬ್ಯಾಂಕ್, ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ ಹಾಗೂ ಯುನೈಟೆಡ್ ಬ್ಯಾಂಕ್ ವಿಲೀನವಾಗಲಿದೆ. ಇಂಡಿಯನ್ ಬ್ಯಾಂಕ್ ಜೊತೆ ಅಲಹಾಬಾದ್ ಬ್ಯಾಂಕ್ ವಿಲೀನವಾಗಲಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಆಂಧ್ರ ಬ್ಯಾಂಕ್, ಕಾರ್ಪೋರೇಷನ್ ಬ್ಯಾಂಕ್ ವಿಲೀನವಾಗಲಿದೆ. ಕರ್ನಾಟಕದ ಕೆನರಾ ಬ್ಯಾಂಕ್ ಮತ್ತು ಸಿಂಡಿಕೇಟ್ ಬ್ಯಾಂಕ್‍ಗಳನ್ನು ವಿಲೀನ ಮಾಡಲು ಸರ್ಕಾರ ಮುಂದಾಗಿದೆ. ಸಾಲದ ಪ್ರಮಾಣ ಕಡಿಮೆಯಾಗಿದ್ದು, 8.65 ಲಕ್ಷ ಕೋಟಿ ರೂ.ನಿಂದ 7.9 ಲಕ್ಷ ಕೋಟಿ ರೂ.ಗೆ ಇಳಿದಿದೆ ಎಂದು ತಿಳಿಸಿದರು.










