ಮಂಡ್ಯ: ಹಳಿ ದಾಟುವಾಗ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಮಂಡ್ಯ ರೈಲು ನಿಲ್ದಾಣದಲ್ಲಿ ನಡೆದಿದೆ.
ಮೈಸೂರಿನಿಂದ ಬೆಂಗಳೂರಿಗೆ ಮಾಲ್ಗುಡಿ ಎಕ್ಸ್‌ಪ್ರೆಸ್ ಹೊರಟಿತ್ತು. ಈ ವೇಳೆ ದುರಂತ ಸಂಭವಿಸಿದೆ. ಈ ಮಹಿಳೆಯರು ಕಾಚಿಗುಡ ಎಕ್ಸ್‌ಪ್ರೆಸ್ ನಲ್ಲಿ ಪ್ರಯಾಣ ಮಾಡಿದ್ದರು. ಮಂಡ್ಯದಲ್ಲಿ ಇಳಿದುಕೊಂಡು ರೈಲು ಹಳಿ ದಾಟುತ್ತಿದ್ದಾಗ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.
ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.










