ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಯ ಬಂಧನ…

71
firstsuddi

ಮಡಿಕೇರಿ : ಮೇಯಲು ಕಟ್ಟಿಹಾಕಿದ್ದ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ವ್ಯಕ್ತಿಯೊಬ್ಬನನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಸಮೀಪದ ಅಂದಗೋವೆ ಎಂಬಲ್ಲಿ ನಡೆದಿದೆ. ನವೆಂಬರ್ 27ರಂದು ಈ ಹೇಯ ಕೃತ್ಯ ಬೆಳಕಿಗೆ ಬಂದಿದೆ.

ಪೊಲೀಸ್ ಮಾಹಿತಿಯ ಪ್ರಕಾರ ಸುಂಟಿಕೊಪ್ಪ ಸಮೀಪದ ಅಂದಗೋವೆ ಗ್ರಾಮದ ಸಿ.ಎ ದೇವಯ್ಯ ಅವರು ಹಸುವನ್ನು ಮೇಯಲು ಬಿಟ್ಟು ಸಂತೆಗೆ ಹೋಗಿದ್ದರು. ತಾವು ಸಂತೆಗೆ ಹೋಗಿ ವಾಪಸ್ ಬರುವ ಸಂದರ್ಭ ತಮ್ಮ ಗದ್ದೆಯ ದಾರಿಯಲ್ಲಿ ಮೋಟಾರ್ ಬೈಕ್ ನಿಂತಿದ್ದನ್ನು ಗಮನಿಸಿದ್ದಾರೆ.

ದೇವಯ್ಯ ಮನೆಗೆ ಹೋಗಿ ಮೇಯಲು ಬಿಟ್ಟಿದ್ದ ಹಸುವನ್ನು ವಾಪಸ್ ಕೊಟ್ಟಿಗೆಗೆ ತರಲು ಹೋದ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಹಸುವಿನ ಮೇಲೆ ಪೈಶಾಚಿಕ ಕೃತ್ಯ ಎಸಗುತ್ತಿರುವುದನ್ನು ಕಂಡಿದ್ದಾರೆ. ಕೂಡಲೇ ಸ್ಥಳೀಯರ ಸಹಾಯದೊಂದಿಗೆ ಆರೋಪಿಯನ್ನು ಹಿಡಿದಿದ್ದಾರೆ. ಆರೋಪಿ ಸುಂಟಿಕೊಪ್ಪ ಪಂಪ್ ಹೌಸ್ ನಿವಾಸಿ ಅಬೂಬಕ್ಕರ್ ಸಿದ್ಧಿಕ್ ಎಂದು ತಿಳಿದು ಬಂದಿದೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿ ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.

ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಭಾರತೀಯ ದಂಡ ಸಂಹಿತೆಯ ಕಲಂ 377ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.