ಕಲಬುರಗಿ : ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವಿದ್ಯಾರ್ಥಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಶರಣಬಸವೇಶ್ವರ ಮಹಾವಿದ್ಯಾಲಯದಲ್ಲಿ ಓದುತ್ತಿದ್ದ ಮೊಹಮ್ಮದ್ ಮುದ್ದಸೀರ್(19) ಮೃತ ಯುವಕ. ನಿನ್ನೆ ಸಂಜೆ 4 ಗಂಟೆ ಸುಮಾರಿಗೆ ಕಲಬುರಗಿ ಛೋಟಾ ರೋಜಾ ಬಡಾವಣೆಯ ಬೌವುಲಿಗಲ್ಲಿಯ ಅಮೀರ್ ಗುಲಶನ್ ಫಂಕ್ಷನ್ ಹಾಲ್ ಬಳಿ ದುಷ್ಕರ್ಮಿಗಳು ವಿದ್ಯಾರ್ಥಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಪರಾರಿಯಾಗಿದ್ದರು. ಗಂಭೀರ ಗಾಯಗೊಂಡ ಮುದ್ದಸೀರ್ ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ರಾತ್ರಿ ಮೃತಪಟ್ಟಿದ್ದಾನೆ.
ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ರೋಜಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










