ಹಾವೇರಿ : ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.
ಶ್ರೀನಿವಾಸ ಮಾನೆ 19ನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ್ ಅವರಿಗಿಂತ 7598 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಒಟ್ಟು ಮತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ 87, 113 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ್ ಗೆ 79,515 ಮತಗಳು ಸಿಕ್ಕಿವೆ. ಇನ್ನೂ ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಖ್ 921 ಮತಗಳನ್ನು ಪಡೆದಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯಾದ ಹಾನಗಲ್ ಕ್ಷೇತ್ರ ಭಾರೀ ಪ್ರತಿಷ್ಠೆಗೆ ಕಾರಣವಾಗಿತ್ತು. ಮುಖ್ಯಮಂತ್ರಿ ಸೇರಿದಂತೆ ಬಿಜೆಪಿಯ ಹಲವು ಮುಖಂಡರು ಪ್ರಚಾರ ನಡೆಸಿದ್ದರು. ಅದರೆ ತವರು ಜಿಲ್ಲೆಯಲ್ಲೇ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಮುಖಭಂಗವಾಗಿದೆ.










