ಬೆಂಗಳೂರು : ಸಿಂದಗಿ ಮತ್ತು ಹಾನಗಲ್ ಎರಡೂ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮೈಸೂರಿಗೆ ಪ್ರವಾಸಕ್ಕೆ ತೆರಳುವ ಮುನ್ನ ಆರ್ ಟಿ ನಗರ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇನ್ನೆರಡು ಗಂಟೆಗಳಲ್ಲಿ ಎರಡೂ ಕ್ಷೇತ್ರಗಳ ಫಲಿತಾಂಶಗಳ ಸ್ಪಷ್ಟ ಚಿತ್ರಣ ಹೊರಬೀಳಲಿದೆ. ಎರಡೂ ಕ್ಷೇತ್ರಗಳಲ್ಲಿ ನಮ್ಮ ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದರು.
ಕಬಿನಿ ಜಲಾಶಯ ಮತ್ತು ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮೈಸೂರಿಗೆ ತೆರಳುತ್ತಿದ್ದಾರೆ.










